Header Ads Widget

ಸರ್ಚ್ ಕೂರ್ಗ್ ಮೀಡಿಯ

‘ಸಹಾಯ ಕೋರಿ ಮನವಿ’: ಜಿಲ್ಲಾಡಳಿತ ಸ್ಪಂದನೆ

‘ಸಹಾಯ ಕೋರಿ ಮನವಿ’: ಜಿಲ್ಲಾಡಳಿತ ಸ್ಪಂದನೆ


ಮಡಿಕೇರಿ ಡಿ.16: ಮೂರ್ನಾಡು ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಎಚ್.ವಿ ಲೇಖಾಶ್ರೀ ಅವರು ಕಾಲೇಜಿನ ವ್ಯಾಸಾಂಗಕ್ಕಾಗಿ ಶುಲ್ಕ ಭರಿಸಲು ಕಷ್ಟ ಸಾಧ್ಯವಾಗಿದೆ ಎಂದು ಪತ್ರಿಕೆಯಲ್ಲಿ ‘ಸಹಾಯ ಕೋರಿ ಮನವಿ’ ಮಾಡಿದ್ದ ಹಿನ್ನಲೆ ಜಿಲ್ಲಾಡಳಿತದಿಂದ ಸ್ಪಂದನೆ ದೊರೆತಿದೆ.

 ಪತ್ರಿಕೆಯಲ್ಲಿ ಸಹಾಯ ಕೋರಿ ಮನವಿಯ ಪ್ರಕಟನೆಯನ್ನು ಗಮನಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು, ಈ ಸಂಬಂಧ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕೂಡಲೇ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಿದ್ದರು. 

ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ವಿದ್ಯಾರ್ಥಿನಿ ಲೇಖಾಶ್ರೀ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದ ಸಂದರ್ಭದಲ್ಲಿ ವಿದ್ಯಾರ್ಥಿನಿಯು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ್ದು, ಇದುವರೆಗೆ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿಲ್ಲ. ಈ ಹಿನ್ನಲೆ ಸರ್ಕಾರದಿಂದ ದೊರೆಯು ಶಿಷ್ಯವೇತನ ದೊರೆತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ ಎಂದು ಶೇಖರ್ ಅವರು ತಿಳಿಸಿದ್ದಾರೆ.  

ಸದ್ಯ ಕಾಲೇಜಿಗೆ ಶುಲ್ಕ ಭರಿಸಬೇಕಿರುವುದರಿಂದ ಮೂರ್ನಾಡು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಗೆ ಮನವಿ ಮಾಡಿದ ಹಿನ್ನೆಲೆ, ತಕ್ಷಣವೇ ಸ್ಪಂದಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಡಿ ಮೀಸಲಿರುವ ಅನುದಾನದಲ್ಲಿ ಕಾಲೇಜಿಗೆ 7200 ರೂ ಭರಿಸಲು ವಿದ್ಯಾರ್ಥಿನಿಗೆ ಮೂರ್ನಾಡು ಗ್ರಾ.ಪಂ.ಅಧ್ಯಕ್ಷರಾದ ಸುಜಾತ ಹಾಗೂ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಅವರು   ಚೆಕ್ ಅನ್ನು ಹಸ್ತಾಂತರಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾಹಿತಿ ನೀಡಿದ್ದಾರೆ. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯದೇ ಇರುವುದು ಜಿಲ್ಲೆಯ ಅಲ್ಲಲ್ಲಿ ಕಂಡುಬರುತ್ತಿದೆ. ಇದರಿಂದಾಗಿ ಸರ್ಕಾರದಿಂದ ದೊರೆಯುವ ಸೌಲಭ್ಯದಿಂದ ವಂಚಿತರಾಗಬೇಕಾಗುತ್ತದೆ. ಆದ್ದರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆಯುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮನವಿ ಮಾಡಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,