Header Ads Widget

ಸರ್ಚ್ ಕೂರ್ಗ್ ಮೀಡಿಯ

ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ಅಭಿವೃದ್ಧಿಗೆ ಕೈಜೋಡಿಸಿ: ಸಂಘದ ಅಧ್ಯಕ್ಷರಾದ ಸಿ.ವಿ. ನಾಗೇಶ್ 


ಮಡಿಕೇರಿ ಡಿ.16: ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ಬಲಪಡಿಸುವಲ್ಲಿ ಎಲ್ಲರೂ ಕೈ ಜೋಡಿಸುವಂತೆ ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರಾದ ಸಿ.ವಿ. ನಾಗೇಶ್ ಅವರು ಕೋರಿದ್ದಾರೆ. 

ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ್ ಸಭಾಂಗಣದಲ್ಲಿ ಗುರುವಾರ ನಡೆದ ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲಾ ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘವು ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ವಿವಿಧ ಇಲಾಖೆಗಳು ಹಾಗೂ ಉದ್ಯಮಿದಾರರು. ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದಲ್ಲಿ ಕಚೇರಿಗೆ ಬೇಕಿರುವ ಅಗತ್ಯ ವಸ್ತುಗಳ ಖರೀದಿಗೆ ಮುಂದಾಗುವಂತೆ ಅವರು ತಿಳಿಸಿದರು. 

       ಜಿಲ್ಲೆಯಲ್ಲಿ ಉತ್ಪಾದಿಸುವ ವಿವಿಧ ರೀತಿಯ ಉತ್ಪನ್ನಗಳನ್ನು ಮಾರಾಟ ಮಾಡಲು ಸಹಕಾರ ಸಂಘ ಉದ್ದೇಶಿಸಿದೆ. ಆ ದಿಸೆಯಲ್ಲಿ ಸಹಕಾರ ಸಂಘದ ಉದ್ದೇಶಗಳನ್ನು ಈಡೇರಿಸಲು ಶ್ರಮಿಸಬೇಕಿದೆ ಎಂದು ಸಿ.ವಿ ನಾಗೇಶ ಅವರು ಹೇಳಿದರು. 

ಶೇ 1 ಅಥವಾ 2 ರಷ್ಟು ಸೇವಾ ಶುಲ್ಕ ಪಡೆದು ಪ್ರತಿಯೊಬ್ಬ ಗ್ರಾಹಕರಿಗೂ ಅನುಕೂಲವಾಗುವಂತೆ ಸಂಘ ಪ್ರಯತ್ನಿಸಿದೆ. ಆ ನಿಟ್ಟಿನಲ್ಲಿ ಗ್ರಾಹಕರಿಗೂ ಮತ್ತು ಸಹಕಾರ ಸಂಘ ಬೆಳವಣಿಗೆಗೂ ಸಹಕಾರಿಯಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದರು.

ಜಿಲ್ಲಾ ಕೈಗಾರಿಕ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಸಮಗ್ರ ಬೈಲಾ ತಿದ್ದುಪಡಿ ಮಾಡಲಾಗುವುದು. ಆ ನಿಟ್ಟಿನಲ್ಲಿ ಸಹಕಾರ ಸಂಘ ಅಭಿವೃದ್ಧಿಗೆ ಸಮಾಜಮುಖಿಯಾಗಿ ಬೆಳೆಯಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಅವರು ತಿಳಿಸಿದರು.

ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಶಂಕರ ನಾರಾಯಣ ಅವರು ಮಾತನಾಡಿ ಜಿಲ್ಲಾ ಕೈಗಾರಿಕ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ಅಭಿವೃದ್ದಿಗೆ ನೂತನ ಅಧ್ಯಕ್ಷರು ಶ್ರಮಿಸುತ್ತಿದ್ದಾರೆ. ಸಹಕಾರ ಸಂಘವನ್ನು ಲಾಭದತ್ತ ಕೊಂಡ್ಯೊಯ್ಯುವಲ್ಲಿ ಕೈಜೋಡಿಸುವಂತೆ ಅವರು ಮನವಿ ಮಾಡಿದರು.

ಸಹಕಾರ ಸಂಘಗಳ ಉಪ ನಿಬಂಧಕರಾದ ಸಲೀಂ ಅವರು ಮಾತನಾಡಿ ಸಹಕಾರ ಸಂಘದಲ್ಲಿ ಉದ್ಯಮ ಅಭಿವೃದ್ದಿಗೆ ಸಾಕಷ್ಟು ಅವಕಾಶ ಇದೆ. ಇವುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗುವಂತಾಬೇಕು. ಸಹಕಾರ ಸಂಘದಲ್ಲಿ ಹಲವು ವೈವಿದ್ಯತೆಗಳಿದ್ದು, ಅವುಗಳನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದರು.   

ಜಿಲ್ಲಾ ಕೈಗಾರಿಕ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್.ರಘು ಅವರು ಮಾತನಾಡಿ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಹೊಸ ಉದ್ಯಮ ಆರಂಭಕ್ಕೆ  25 ಲಕ್ಷ ರೂ ವರೆಗೆ ಸಾಲ ಸೌಲಭ್ಯಕ್ಕೆ ಅವಕಾಶವಿದೆ  ಇದನ್ನು ಅರ್ಹರು ಪಡೆದುಕೊಳ್ಳುವಂತೆ ಸಲಹೆ ಮಾಡಿದರು.

ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಹಲವು ಸಹಾಯಧನ ಮತ್ತು ಸೌಲಭ್ಯವಿದ್ದು ಇದನ್ನು ಪಡೆದುಕೊಳ್ಳುವಂತೆ ಅವರು ಸಲಹೆ ಮಾಡಿದರು.

ಕೈಗಾರೀಕೊದ್ಯಮಿಗಳಾದ ಪಿ.ಕೆ.ದೇವಾನಂದ, ರೂಪ ಅವರು ಕೈಗಾರಿಕೆ ಬೆಳವಣಿಗೆ ಹಲವು ಸಲಹೆ ನೀಡಿದರು. ಸಂಘದ ನಿರ್ದೇಶಕರಾದ ಫಾತೀಮಾ, ಆಶಾ ಚಿನ್ನಪ್ಪ, ಹಲವು ಕೈಗಾರಿಕೋದ್ಯಮಿಗಳು ಸದಸ್ಯರು ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,