Header Ads Widget

ಸರ್ಚ್ ಕೂರ್ಗ್ ಮೀಡಿಯ

ಭತ್ತ ಖರೀದಿ ಪ್ರಕ್ರಿಯೆ ಆರಂಭ

ಭತ್ತ ಖರೀದಿ ಪ್ರಕ್ರಿಯೆ ಆರಂಭ 


ಮಡಿಕೇರಿ ಡಿ.07: ಜಿಲ್ಲೆಯಲ್ಲಿ 2021-22 ನೇ ಸಾಲಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸಾಮಾನ್ಯ ಭತ್ತಕ್ಕೆ ಪ್ರತೀ ಕ್ವಿಂಗೆ 1940 ರೂಪಾಯಿ ಹಾಗೂ ‘ಎ’ ಗ್ರೇಡ್ ಭತ್ತಕ್ಕೆ ಪ್ರತೀ ಕ್ವಿಂಟಾಲ್‍ಗೆ 1960 ರೂ.ಗಳನ್ನು ಸರ್ಕಾರವು ನಿಗಧಿಪಡಿಸಿದೆ. 

     ಜಿಲ್ಲೆಯಲ್ಲಿ ಒಟ್ಟು ನಾಲ್ಕು ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕುಶಾಲನಗರ- ಕೆಎಸ್‍ಸಿಎಂಎಫ್ ಆವರಣ ಬಾಪೂಜಿ ಬಡಾವಣೆ ಕುಶಾಲನಗರ ತಾಲ್ಲೂಕು, ಶನಿವಾರಸಂತೆ-ಶ್ರೀ ಗಜಾನನ ಮಾಡರ್ನ್ ಅಕ್ಕಿ ಗಿರಣಿ, ಗುಡುಗಳಲೆ ಶನಿವಾರಸಂತೆ, ಮಡಿಕೇರಿ-ಎಪಿಎಂಸಿ ಆವರಣ, ಕೆಎಸ್‍ಆರ್‍ಟಿಸಿ ಡಿಪೋ ಎದುರು ಮಡಿಕೇರಿ ನಗರ ಹಾಗೂ ಗೋಣಿಕೊಪ್ಪ- ಎಪಿಎಂಸಿ ಆವರಣ, ಹರಿಶ್ಚಂದ್ರಪುರ, ಗೋಣಿಕೊಪ್ಪ. ಈ ಸ್ಥಳಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. 

      ರೈತರು ತಮ್ಮ ಪ್ರೂಟ್ಸ್ ಗುರುತಿನ ಸಂಖ್ಯೆಯಲ್ಲಿ ಬೆಳೆ ಸಮೀಕ್ಷೆ ಮಾಹಿತಿ ನಮೂದಾಗಿರುವ ಬಗ್ಗೆ ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ಖಚಿತಪಡಿಸಿಕೊಳ್ಳಬೇಕು. ನಂತರ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಲು ಹಾಗೂ ಜಿಲ್ಲೆಯ ರೈತರು ಸರ್ಕಾರದ ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,