Header Ads Widget

Responsive Advertisement

ವಿಧಾನ ಪರಿಷತ್ ಚುನಾವಣೆ; ಸುಸೂತ್ರವಾಗಿ ನಡೆದ ಮಸ್ಟರಿಂಗ್ ಕಾರ್ಯ

ವಿಧಾನ ಪರಿಷತ್ ಚುನಾವಣೆ; ಸುಸೂತ್ರವಾಗಿ ನಡೆದ ಮಸ್ಟರಿಂಗ್ ಕಾರ್ಯ 


ಮಡಿಕೇರಿ ಡಿ.09: ವಿಧಾನ ಪರಿಷತ್ ಚುನಾವಣೆಯ ಮಸ್ಟರಿಂಗ್ ಕಾರ್ಯವು ನಗರದ ಸಂತ ಜೋಸೆಫರ ಶಾಲೆಯಲ್ಲಿ ಗುರುವಾರ ಸುಸೂತ್ರವಾಗಿ ನಡೆಯಿತು.   

      ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಮತಗಟ್ಟೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಪರಿಶೀಲಿಸಿ, ಅಗತ್ಯ ತಯಾರಿ ಮಾಡಿಕೊಳ್ಳುತ್ತಿದ್ದು ಕಂಡುಬಂದಿತು. ಸೆಕ್ಟರ್ ಅಧಿಕಾರಿಗಳು ತಮ್ಮ ಮತಗಟ್ಟೆ ವ್ಯಾಪ್ತಿಯ ಮತಗಟ್ಡೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಚರ್ಚಿಸಿ, ಚುನಾವಣಾ ಅಗತ್ಯ ಸಾಮಗ್ರಿಗಳನ್ನು ಜತನ ಮಾಡಿಕೊಳ್ಳುತ್ತಿದ್ದ ದೃಶ್ಯ ಕಂಡುಬಂದಿತು.   

      ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಸ್ಟರಿಂಗ್ ಕೇಂದ್ರಕ್ಕೆ ತೆರಳಿ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು, ಸೆಕ್ಟರ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ವಿಧಾನ ಪರಿಷತ್ ಚುನಾವಣೆ ಸಂಬಂಧ ಅಗತ್ಯ ಸಾಮಗ್ರಿಗಳನ್ನು ಪಡೆದಿರುವ ಬಗ್ಗೆ ಮಾಹಿತಿ ಪಡೆದರು.  

      ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ವಿಧಾನ ಪರಿಷತ್ ಚುನಾವಣೆಯ ಮಸ್ಟರಿಂಗ್ ಕಾರ್ಯವು ಸುಸೂತ್ರವಾಗಿ ನಡೆದಿದೆ. ಚುನಾವಣೆ ಸಂಬಂಧ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ ಎಂದರು.                                                                 

       ‘ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ನಗರಸಭಾ ಸದಸ್ಯರು ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತದಾನ ಮಾಡಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1,329 ಮಂದಿ ಮತ ಚಲಾಯಿಸಲಿದ್ದಾರೆ. ಮತದಾನವು ಡಿಸೆಂಬರ್, 10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದು ಅವರು ಹೇಳಿದರು.   

ಕೊಡಗು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆ ಸಂಬಂಧ ಒಟ್ಟು 108 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.’ 

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ತಹಶೀಲ್ದಾರ್ ಮಹೇಶ್ ಇತರರು ಇದ್ದರು.

ಇನ್ನಷ್ಟು ಮಾಹಿತಿ:-ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಸಂಸದರು, ಮಡಿಕೇರಿ ವಿಧಾನಸಭೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಡಿಕೇರಿ ನಗರಸಭೆಯ ಎಲ್ಲಾ ಸದಸ್ಯರುಗಳಿಗೆ ಮತದಾನದ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿದರು.

 ಪೊನ್ನಂಪೇಟೆ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಪೆÇನ್ನಂಪೇಟೆ ಗ್ರಾಮ ಪಂಚಾಯತಿಯ ಸದಸ್ಯರುಗಳಿಗೆ ಮತದಾನದ ಅವಕಾಶ ಕಲ್ಪಿಸಲಾಗಿದೆ. ಕುಶಾಲನಗರ ಪಟ್ಟಣ ಪಂಚಾಯತಿಯ ಸದಸ್ಯರುಗಳಿಗೆ ಕುಶಾಲನಗರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮತದಾನದ ಅವಕಾಶ ಕಲ್ಪಿಸಲಾಗಿದೆ. ವಿರಾಜಪೇಟೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ವಿರಾಜಪೇಟೆ ಪಟ್ಟಣ ಪಂಚಾಯತಿಯ ಸದಸ್ಯರುಗಳಿಗೆ ಮತ್ತು ವಿರಾಜಪೇಟೆ ವಿಧಾನಸಭಾ ಶಾಸಕರಿಗೆ ಮತದಾನದ ಅವಕಾಶ ಕಲ್ಪಿಸಲಾಗಿದೆ.    

      ಸೋಮವಾರಪೇಟೆ ಪಟ್ಟಣ ಪಂಚಾಯತಿಯ ಸದಸ್ಯರುಗಳಿಗೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮತದಾನದ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ 103 ಗ್ರಾಮ ಪಂಚಾಯಿತಿಗಳ ಸದಸ್ಯರಿಗೆ ಆಯಾಯಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿಯೇ ವ್ಯವಸ್ಥೆ ಮಾಡಲಾಗಿದೆ. 

       ಚುನಾವಣೆಯನ್ನು ಯಾವುದೇ ಅಡಚಣೆ ಇಲ್ಲದೆ ಸುಗಮವಾಗಿ ನಡೆಸಲು ಜಿಲ್ಲೆಯಲ್ಲಿ ಒಟ್ಟು 14 ಫ್ಲೈಯಿಂಗ್ ಸ್ಕ್ವಾಡ್ ತಂಡವನ್ನು ಮತ್ತು ಪ್ರತಿ 5-6 ಮತಗಟ್ಟೆಗೆ ಒಬ್ಬರಂತೆ 20 ಸೆಕ್ಟರ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಈ ತಂಡಗಳು ಅವರ ವ್ಯಾಪ್ತಿಯಲ್ಲಿ ಡಿಸೆಂಬರ್, 10 ರವರೆಗೆ ಚುನಾವಣಾ ಅಕ್ರಮಗಳನ್ನು ಪತ್ತೆ ಹಚ್ಚಿ ಭಾರತ ದಂಡ ಸಂಹಿತೆ ಹಾಗೂ ಪ್ರಜಾ ಪ್ರತಿನಿದಿs ಕಾಯ್ದೆ 1951 ರ ಪ್ರಕಾರ ಪ್ರಕರಣ ದಾಖಲಿಸಲು ಕ್ರಮವಹಿಸಲಿದ್ದಾರೆ. 

      ಎಲ್ಲಾ 108 ಮತಗಟ್ಟೆಗಳಿಗೆ ಕೇಂದ್ರ ಸರ್ಕಾರಿ ನೌಕರರನ್ನು ಮೈಕ್ರೋ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಮೊಬೈಲ್, ಕ್ಯಾಮರ ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತಗಟ್ಟೆಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಮತಗಟ್ಟೆಯ ಒಳಗೆ ಒಬ್ಬ ಮತದಾರ ಮತ ಚಲಾಯಿಸಿ ಹೊರಹೋದ ನಂತರವೇ ಮತ್ತೊಬ್ಬ ಮತದಾರ ಒಳಗೆ ಬರುವುದು. ಮತದಾರರು ಭಾರತ ಚುನಾವಣಾ ಆಯೋಗದ ಗುರುತಿನ ಚೀಟಿಯನ್ನು ಹಾಗೂ ಭಾರತ ಚುನಾವಣಾ ಆಯೋಗ ನಿರ್ದಿಷ್ಟಪಡಿಸಿದ ಇತರೆ ಯಾವುದೇ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಿ ಮತದಾನವನ್ನು ಮಾಡಬಹುದು.

 ಪ್ರತಿ ಮತಗಟ್ಟೆಯಲ್ಲಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿ/ ಸಿಬ್ಬಂದಿಗಳನ್ನು ಗುರುತು ಹಚ್ಚುವ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಮತದಾರರು ಪ್ರಾಶಸ್ತ್ಯದ ಮತವನ್ನು ಅಭ್ಯರ್ಥಿಗಳಿಗೆ ಚಲಾಯಿಸಬಹುದು. ಮತದಾರರು ಮತದ ಗೋಪ್ಯತೆಯನ್ನು ಕಾಪಾಡಬೇಕು. ಮತ ಚಲಾಯಿಸಲು ಚುನಾವಣಾದಿsಕಾರಿ ಅವರು ನೀಡಿರುವ ನೇರಳೆ ಬಣ್ಣದ ಪೆನ್ನನ್ನು ಮಾತ್ರ ಬಳಸತಕ್ಕದ್ದು. ಮತದಾರ ಮತ ಚಲಾಯಿಸಿದ ಬಳಿಕ ಮತಪತ್ರವನ್ನು ಪ್ರದರ್ಶಿಸಲು ಅವಕಾಶವಿರುವುದಿಲ್ಲ.  

ಜಿಲ್ಲೆಯಲ್ಲಿ 40-ಸೂಕ್ಷ್ಮ, 11-ಅತೀ ಸೂಕ್ಷ್ಮ ಮತ್ತು 1-ನಕ್ಸಲ್ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಈ ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಚುನಾವಣಾ ಕಾರ್ಯಕ್ಕೆ ಒಟ್ಟು 40 ವಾಹನಗಳನ್ನು (16-ಜೀಪುಗಳು ಮತ್ತು 26-ಮ್ಯಾಕ್ಸಿಕ್ಯಾಬ್) ಬಳಕೆ ಮಾಡಲಾಗುತ್ತಿದೆ. ಒಟ್ಟು 127 ಮತಗಟ್ಟೆ ಅಧಿಕಾರಿಗಳ ತಂಡವನ್ನು ನೇಮಕ ಮಾಡಲಾಗಿದೆ. ಪ್ರತಿ ತಂಡದಲ್ಲಿ ಒಬ್ಬರು ಅಧ್ಯಕ್ಷಾಧಿಕಾರಿ ಮತ್ತು ಒಬ್ಬರು ಮತಗಟ್ಟೆ ಅಧಿಕಾರಿ ಇರುತ್ತಾರೆ.  

      ಡಿಸೆಂಬರ್, 10 ರಂದು ಮತದಾನ ಮುಗಿದ ನಂತರ ಚುನಾವಣಾ ಮತಪೆಟ್ಟಿಗೆ ಮತ್ತು ದಾಖಲೆ ಪತ್ರಗಳನ್ನು ಮಡಿಕೇರಿ ನಗರದ ಸಂತ ಜೋಸೆಫರ ಕಾನ್ವೆಂಟ್‍ನಲ್ಲಿ ಇರುವ ಭದ್ರತಾ ಕೊಠಡಿಯಲ್ಲಿ ಪೋಲಿಸ್ ಭದ್ರತೆಯೊಂದಿಗೆ ಇಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. 

ಭಾರತ ಚುನಾವಣಾ ಆಯೋಗವು ಕೊಡಗು ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಐ.ಎ.ಎಸ್., ಅಧಿಕಾರಿಯಾದ ಡಾ.ವಿಶಾಲ್.ಆರ್, ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಕೊಡಗು ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,