Header Ads Widget

Responsive Advertisement

13.24 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅಪ್ಪಚ್ಚು ರಂಜನ್ ಚಾಲನೆ

13.24 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅಪ್ಪಚ್ಚು ರಂಜನ್ ಚಾಲನೆ


ಮಡಿಕೇರಿ ಜ.21: ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಕ್ಕಂದೂರು, ಕೆ.ನಿಡುಗಣೆ, ಹೊದ್ದೂರು, ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 13.24 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.  

ಮಡಿಕೇರಿ ತಾಲ್ಲೂಕಿನ ಮಕ್ಕಂದೂರು ಬಳಿ ಗ್ರಾಮೀಣ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯಿಂದ ಕೊಡಗು ಜಿಲ್ಲೆಗೆ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ಆ ದಿಸೆಯಲ್ಲಿ ಪ್ರತೀ ಗ್ರಾ.ಪಂ.ಗಳ ಗ್ರಾಮೀಣ ರಸ್ತೆ, ಸೇತುವೆ ಮತ್ತಿತರ ಮೂಲಸೌಲಭ್ಯಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು. 

     ಈಗಾಗಲೇ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 48 ಗ್ರಾ.ಪಂ.ಗಳಲ್ಲಿ 20 ಗ್ರಾ.ಪಂ.ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಬಾಕಿ 28 ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಲಾಗುತ್ತದೆ ಎಂದು ಶಾಸಕರು ಹೇಳಿದರು. 

     ಗ್ರಾ.ಪಂ.ವ್ಯಾಪ್ತಿಯಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕು. ಸ್ಥಳೀಯರು ಕಾಮಗಾರಿ ವೀಕ್ಷಣೆ ಮಾಡುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು.  

     ಈ ಹಿಂದೆ ಬಾಕಿ ಇರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅಪ್ಪಚ್ಚು ರಂಜನ್ ಅವರು ತಿಳಿಸಿದರು.   

    ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್‍ಗಳಿಗೆ ಭೇಟಿ ನೀಡಿ, ವಿವಿಧ ಗ್ರಾ.ಪಂ.ಗಳಲ್ಲಿ ಆಗಬೇಕಿರುವ ಕೆಲಸಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲಾಗುತ್ತದೆ ಎಂದರು. 

      ಮಕ್ಕಂದೂರು ಗ್ರಾಮದ ಪ್ರಮುಖರಾದ ನಾಪಂಡ ರವಿಕಾಳಪ್ಪ ಅವರು ಮಕ್ಕಂದೂರು ಗ್ರಾ.ಪಂ.ವ್ಯಾಪ್ತಿಗೆ ಶಾಸಕರು ರಸ್ತೆ, ಸೇತುವೆ, ಕುಡಿಯುವ ನೀರು ಮತ್ತಿತರ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಿಗೆ 3 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು. 

      ಜಿ.ಪಂ.ಮಾಜಿ ಅಧ್ಯಕ್ಷರಾದ ಬಿ.ಎ.ಹರೀಶ್, ಮಕ್ಕಂದೂರು ಗ್ರಾ.ಪಂ.ಅಧ್ಯಕ್ಷರಾದ ಕನ್ನಿಕಂಡ ಶ್ಯಾಮ್ ಸುಬ್ಬಯ್ಯ, ಉಪಾಧ್ಯಕ್ಷರಾದ ಪಿ.ಎಸ್.ಕವಿತಾ, ಸದಸ್ಯರಾದ ಗಣೇಶ್, ದೀನ, ರಮೇಶ್, ವಿಮಲ, ಸುಮಿತ್ರ, ಸುನಂದ ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,