ಮಡಿಕೇರಿ ನಗರಸಭೆ; 212 ಲಕ್ಷ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅಪ್ಪಚ್ಚು ರಂಜನ್ ಚಾಲನೆ
ಮಡಿಕೇರಿ: ಮಡಿಕೇರಿ ನಗರಸಭೆ ವ್ಯಾಪ್ತಿಯ ಎಸ್‍ಎಫ್‍ಸಿ, 14 ಮತ್ತು 15 ನೇ ಹಣಕಾಸು ಆಯೋಗದ ಅನುದಾನದಡಿ ಸುಮಾರು 212.94 ಲಕ್ಷ ರೂಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಗುದ್ದಲಿ ಪೂಜೆಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಂಗಳವಾರ ನೆರವೇರಿಸಿದರು.
ನಗರದ ಇಂದಿರಾ ಕ್ಯಾಂಟಿನ್ ಬಳಿ ಮಳೆ ನೀರು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಎಸ್‍ಎಫ್‍ಸಿ ಮತ್ತು 14 ಮತ್ತು 15 ನೇ ಹಣಕಾಸು ಆಯೋಗದ ಅನುದಾನ ಸೇರಿದಂತೆ ಒಟ್ಟು 212.94 ಲಕ್ಷ ರೂ.ಗಳ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.
ಸುಮಾರು 111.92 ಲಕ್ಷ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗಿದೆ. ಸುಮಾರು 37.94 ಲಕ್ಷ ರೂ.ಗಳ ಕಾಮಗಾರಿ ಉದ್ಘಾಟಿಸಲಾಗಿದೆ. ಹಾಗೆಯೇ 63.08 ಲಕ್ಷ ರೂ.ಗಳ ಕಾಮಗಾರಿ ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ಎಂ.ಪಿ.ಅಪ್ಪಚ್ಚುರಂಜನ್ ಅವರು ಹೇಳಿದರು.
ಶಾಸಕರ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರ 50 ಕೋಟಿ ರೂ. ಬಿಡುಗಡೆ ಮಾಡಿದ್ದು, ಇದರಲ್ಲಿ ಲೋಕೋಪಯೋಗಿ ಇಲಾಖೆಗೆ 20 ಕೋಟಿ ರೂ., ಪಂಚಾಯತ್ ರಾಜ್ ಇಲಾಖೆಗೆ 20 ಕೋಟಿ ರೂ., ನಗರಸಭೆ 5 ಕೋಟಿ ರೂ. ಹಾಗೂ ಕುಶಾಲನಗರ ಪುರಸಭೆ ಮತ್ತು ಸೋಮವಾರಪೇಟೆ ಪ.ಪಂ.ಗೆ ಒಟ್ಟು 5 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಈ ಸಂಬಂಧ ಕ್ರಿಯಾ ಯೋಜನೆ ತಯಾರಿಸಲು ನಿರ್ದೇಶನ ನೀಡಲಾಗಿದೆ ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಹೇಳಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮೀಣ, ನಗರ, ಪಟ್ಟಣ ಪ್ರದೇಶದ ರಸ್ತೆಗಳನ್ನು ಸರ್ವ ಋತು ರಸ್ತೆಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದು ಶಾಸಕರು ಹೇಳಿದರು.
ಮಡಿಕೇರಿ ನಗರಸಭಾ ವ್ಯಾಪ್ತಿಯ ರಾಜಶೇಖರ ಹೋಂಮೇಡ್ಸ್ ಹಿಂಬದಿ ರಸ್ತೆಯಿಂದ ಗಣಪತಿ ದೇವಸ್ಥಾನದವರೆಗೆ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಕನ್ನಂಡಬಾಣೆ, ಪಂಪ್‍ಹೌಸ್ ನಿರ್ಮಾಣ ಕಾಮಗಾರಿ, ಕನ್ನಂಡಬಾಣೆ ಹೊಸ ಪಂಪ್‍ಹೌಸ್‍ನಲ್ಲಿ ಪ್ಯಾನಲ್ ಬೋರ್ಡ್ ಮತ್ತು ಸ್ಟಾರ್ಟರ್ ಅಳವಡಿಸಿ ಮೋಟಾರ್ ಪಂಪ್ ಅಳವಡಿಸುವ ಕಾಮಗಾರಿ, ಕನ್ನಂಡಬಾಣೆ ಹೊಸ ಪಂಪ್‍ಹೌಸ್‍ನಲ್ಲಿ ಪ್ಯಾನಲ್ ಬೋರ್ಡ್ ಅಳವಡಿಸಿ ಮೋಟಾರ್ ಪಂಪ್ ಸ್ಥಳಾಂತರಿಸುವ ಕಾಮಗಾರಿ ಉದ್ಘಾಟಿಸಿದರು.
ತುಳಸಿ ಭವನ ಹಿಂಭಾಗ, ಕನ್ನಂಡಬಾಣೆಗೆ ಹೋಗುವ ರಸ್ತೆಯಲ್ಲಿ ಡಾ.ರವಿಕಿರಣ್ ಮನೆ ಹತ್ತಿರ ಚರಂಡಿ ಹಾಗೂ ಕಲ್ವರ್ಟ್ ನಿರ್ಮಾಣ, ಅಬ್ದುಲ್ ಕಲಾಂ ಲೇ ಔಟ್‍ನಲ್ಲಿ ಆಸಿಫ್ ರವರ ಮನೆಯಿಂದ ಫರೀದ್‍ರವರ ಮನೆಯವರೆಗೆ ಚರಂಡಿ ನಿರ್ಮಾಣ ಕಾಮಗಾರಿ, ಸ್ಟೀವರ್ಟ್ ಹಿಲ್ ಬಳಿಯ ತುಳಿಸಿ ಮನೆ ಮುಂಭಾಗ ಚರಂಡಿ ನಿರ್ಮಾಣ ಮತ್ತು ತ್ಯಾಗರಾಜ ಮುಖ್ಯ ರಸ್ತೆಯ ಅಯ್ಯಪ್ಪ ಅವರ ಮನೆ ಮುಂಭಾಗ ಕಲ್ವ್ವರ್ಟ್ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ನಗರಸಭಾ ಸದಸ್ಯರಾದ ಮಹೇಶ್ ಜೈನಿ, ಕೆ.ಎಸ್.ರಮೇಶ್, ಎಸ್.ಸಿ.ಸತೀಶ್, ಅರುಣ್ ಶೆಟ್ಟಿ, ಉಮೇಶ್ ಸುಬ್ರಮಣಿ, ಅಪ್ಪಣ್ಣ, ಚಿತ್ರಾವತಿ, ಕಲಾವತಿ, ಮಂಜುಳ, ಉಷಾ, ಶ್ವೇತಾ, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ನಗರಸಭೆ ಎಇಇ ರಾಜೇಂದ್ರ ಕುಮಾರ್, ಎಇ ಸಮಂತ್ ಕುಮಾರ್ ಇತರರು ಇದ್ದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network