Header Ads Widget

ಸರ್ಚ್ ಕೂರ್ಗ್ ಮೀಡಿಯ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ರಚನೆ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ರಚನೆ


ಮಡಿಕೇರಿ, ಜ. 10:  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿಯ ಪ್ರಥಮ ಸಭೆಯು ಮಡಿಕೇರಿಯ ಕಸಾಪ ಕಚೇರಿಯಲ್ಲಿ ನಡೆಯಿತು.  

ನೂತನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ನೂತನ ಕಾರ್ಯಕಾರಿ ಸಮಿತಿಯ ಜವಾಬ್ದಾರಿಯನ್ನು ಘೋಷಿಸಿದರು.

ಪ್ರಧಾನ ಕಾರ್ಯದರ್ಶಿಯಾಗಿ ಮುನೀರ್ ಅಹಮ್ಮದ್  ಮತ್ತು ಪುದಿಯನೆರವನ ರೇವತಿ ರಮೇಶ್, ಕೋಶಾಧಿಕಾರಿಯಾಗಿ ಎಸ್. ಡಿ.ವಿಜೇತ್, ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ  ಟಿ.ಪಿ.ರಮೇಶ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಸಾಗರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೆ.ನಾ.ವೆಂಕಟ ನಾಯಕ್, ಹಂಚೆಟೀರ ಫ್ಯಾನ್ಸಿ ಮುತ್ತಣ್ಣ, ಸಹನಾ ಕಾಂತಬೈಲು, ರಮ್ಯ ಕೆ.ಜಿ., ಪ್ರೇಮ್ ಕುಮಾರ್,  ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಉಪನಿರ್ದೇಶಕರಾದ ದರ್ಶನ, ಕೊಡಗು ಜಿಲ್ಲಾ ವಾರ್ತಾಧಿಕಾರಿ ಚಿನ್ನಸ್ವಾಮಿ ಅವರನ್ನು ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆರಿಸಿ ಘೋಷಿಸಲಾಯಿತು.

ಸದಸ್ಯತ್ವ ಹೆಚ್ಚಿಸುವ ನಿಟ್ಟಿನಲ್ಲಿ ಚರ್ಚೆ ನಡೆದು ಸಾಹಿತ್ಯಾಸಕ್ತರಿಗೆ ಹೆಚ್ಚು   ಕಸಾಪದ ಸದಸ್ಯತ್ವ ನೀಡುವಂತೆ ತೀರ್ಮಾನಿಸಲಾಯಿತು. 

ಹೆಚ್ಚು ಶಿಕ್ಷಕರನ್ನು ಸದಸ್ಯರನ್ನಾಗಿಸುವ ಮೂಲಕ ವಿದ್ಯಾರ್ಥಿಗಳನ್ನು ಸಾಹಿತ್ಯಿಕವಾಗಿ ಬೆಳೆಸಲು ಮತ್ತು ಕನ್ನಡ ನಾಡು ನುಡಿ, ಸಂಸ್ಕೃತಿಯ ಪರಿಚಯವನ್ನು ಇಂದಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ತೀರ್ಮಾನಿಸಲಾಯಿತು.

ದತ್ತಿನಿದಿ ಹೆಚ್ಚು ಸ್ಥಾಪಿಸುವ ಮೂಲಕ ಕಸಾಪ ದ ಕಾರ್ಯಕ್ರಮಗಳಿಗೆ ಭದ್ರ ಬುನಾದಿ ಹಾಕುವಂತೆ ತೀರ್ಮಾನಿಸಲಾಯಿತು. ಮಡಿಕೇರಿಯಲ್ಲಿ ಕನ್ನಡ ಭವನ ನಿರ್ಮಿಸುವ ಕುರಿತು ಉಪಸಮಿತಿ ರಚಿಸುವಂತೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಅನುಷ್ಟಾನಕ್ಕೆ, ಸದಸ್ಯತ್ವ ನೋಂದಣಿಗೆ, ದತ್ತಿನಿಧಿ ಸ್ಥಾಪನೆಗೆ ಉಪಸಮಿತಿಗಳನ್ನು ರಚಿಸುವಂತೆ ತೀರ್ಮಾನಿಸಲಾಯಿತು.

ಜಿಲ್ಲಾ ಸಮಿತಿ ಮತ್ತು ತಾಲೂಕು ಸಮಿತಿಗಳ ಸದಸ್ಯರ ಪಟ್ಟಿಯನ್ನು ಸಧ್ಯದಲ್ಲೆ ಪ್ರಕಟಿಸುವುದಾಗಿ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಘೋಷಿಸಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,