ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಯುವ ಸಪ್ತಾಹ ಅಂಗವಾಗಿ ಕಾನೂನು ಅರಿವು ಮತ್ತು ತರಬೇತಿ ಕಾರ್ಯಕ್ರಮ
ಮಡಿಕೇರಿ ಜ.17: ರಾಷ್ಟ್ರದ ಸಂಸ್ಕøತಿಯನ್ನು ಪ್ರಪಂಚಕ್ಕೆ ವಿಸ್ತರಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಯುವ ಒಕ್ಕೂಟ, ನೇತಾಜಿ ಗೆಳೆಯುರ ಬಳಗ ಮತ್ತು ಸಂಪಾಜೆ ಚಡಾವು ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಯುವ ಸಪ್ತಾಹ ಅಂಗವಾಗಿ ಕಾನೂನು ಅರಿವು ಮತ್ತು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಯುವಜನರಲ್ಲಿ ದೇಶ ಕಟ್ಟುವ ಶಕ್ತಿ ಇದೆ. ಆದ್ದರಿಂದ ಯುವಜನರು ಸಂಘಟಿತರಾಗಬೇಕು. ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಬಡವರು, ಬಲ್ಲಿದರು, ಶೋಷಣೆಗೆ ತುತ್ತಾದವರಿಗೆ ನ್ಯಾಯ ಒದಗಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳುವುದು ಅಗತ್ಯ. ಬಡ ಜನರಿಗೆ, ದುರ್ಬಲರಿಗೆ ವಂಚಿತರಾದವರಿಗೆ ನ್ಯಾಯ ಕಲ್ಪಿಸುವುದು, ಉಚಿತ ಕಾನೂನು ಅರಿವು ನೆರವು ಮೂಡಿಸಲಾಗುತ್ತದೆ. ಆ ನಿಟ್ಟಿನಲ್ಲಿ ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದರು.
ಜನ ಸಾಮಾನ್ಯರಿಗೆ ಕಾನೂನು ಅರಿವು ಮೂಡಿಸುವುದು, ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರವು ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ನುಡಿದರು.
ಯುವಜನರು ಪೋಕ್ಸೋ ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು. ಮಹಿಳೆಯರು, ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯಬೇಕು. ಇಂತಹ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಎಚ್ಚರವಹಿಸಬೇಕು ಎಂದರು.
ಪೋಕ್ಸೋ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳಬಾರದು. ನೈಜ ಘಟನೆಗಳಿಗೆ ಒತ್ತು ನೀಡಬೇಕಿದೆ ಎಂದರು. ಕಾನೂನು ಸಂಘರ್ಷಕ್ಕೆ ತುತ್ತಾಗದೆ, ಕಾನೂನಿನ ಅರಿವು ನೆರವು ಪಡೆಯಬೇಕು ಎಂದರು.
‘ರಾಷ್ಟ್ರದ ಸಂವಿಧಾನದ ಮೂಲಭೂತ ಕಾನೂನುಗಳು ಹಾಗೂ ಮೂಲಭೂತ ಕರ್ತವ್ಯಗಳ ಬಗ್ಗೆ ಅರಿವು ಇದ್ದಾಗ ಉತ್ತಮ ಜೀವನ ಕಟ್ಟಿಕೊಳ್ಳಬಹುದು. ದೌರ್ಜನ್ಯ, ದಬ್ಬಾಳಿಕೆಯಿಂದ ದೂರವಿರಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ಹೇಳಿದರು.’
ಮೂಲಭೂತ ಕಾನೂನಾತ್ಮಕ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ವಿದ್ಯಾರ್ಥಿ ವೃಂದಕ್ಕೆ ಅತ್ಯಗತ್ಯವಾಗಿದೆ. ತಮ್ಮ ಸುತ್ತಲಿನ ಸಮಾಜ, ಜನರಿಗೆ ಅರಿವು ಮೂಡಿಸುವ ಕಾರ್ಯ ಯುವಶಕ್ತಿಯಿಂದ ನಡೆಯಬೇಕಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್ ಸುಬ್ರಮಣ್ಯ ಅವರು ಅಭಿಪ್ರಾಯಪಟ್ಟರು.
ವಕೀಲರ ಸಂಘದ ಅದ್ಯಕ್ಷರಾದ ಕೆ.ಡಿ.ದಯಾನಂದ ಅವರು ಮಾತನಾಡಿ ಯುವಕರೇ ಭಾರತದ ಆಸ್ತಿಯಾಗಿದ್ದು, ಯುವಕರಿಂದಲೇ ಸದೃಡ ಭಾರತ ನಿರ್ಮಾಣ ಸಾಧ್ಯ ಎಂಬುದು ವಿವೇಕಾನಂದರ ಅಗಮ್ಯ ನಂಬಿಕೆಯಾಗಿತ್ತು ಎಂದು ಹೇಳಿದರು.
ಯುವಕರಿಗೆ ಆಂತರಿಕ ಶಕ್ತಿ, ಸ್ಪೂರ್ತಿ ತುಂಬಿ ದೇಶದ ಪ್ರಬುದ್ದತೆಗೆ ದುಡಿಯುವಂತೆ ಮಾಡಿದ್ದು ಸ್ವಾಮಿ ವಿವೇಕಾನಂದರು ಎಂದರು.
ವಿವೇಕಾನಂದರ ಘೋಷ ವಾಕ್ಯಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು ಹಾಗೂ ಅದನ್ನು ಕರ್ತವ್ಯ ರೂಪದಲ್ಲಿ ಪ್ರದರ್ಶಿಸಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಅವರು ಹೇಳಿದರು.
ಕಾನೂನಾತ್ಮಕ ಅರಿವು ಪ್ರತಿಯೊಬ್ಬರಲ್ಲಿಯೂ ಇರಬೇಕು, ಕಾನೂನಿನ ಬಗ್ಗೆ ಇತರರಿಗೂ ಅರಿವು ಮೂಡಿಸುವ ಪ್ರಕ್ರಿಯೆ ನಡೆಯಬೇಕು. ಜನರಲ್ಲಿ ಜನನ ಪ್ರಮಾಣ ಪತ್ರ, ವಾಹನ ಪರವಾನಗಿ ಇತರ ಪ್ರತಿಯೊಂದು ಮೂಲ ದಾಖಲಾತಿಗಳ ಬಗ್ಗೆ ಅರಿವು ಇರಬೇಕು ಮತ್ತು ಇತರರಿಗೆ ತಿಳುವಳಿಗೆ ನೀಡಬೇಕು ಎಂದು ತಿಳಿಸಿದರು.
ಮೂಲ ದಾಖಲಾತಿಗಳ ಕೊರತೆಯಿಂದ ಸಂಭವಿಸುವ ಗಂಬೀರ ಪರಿಣಾಮಗಳು, ಅಗಮ್ಯ ಅಪರಾಧಗಳ ಬಗ್ಗೆ ಜ್ಞಾನವಿರಬೇಕು. ಸಕಾರಾತ್ಮಕ ಚಿಂತನೆಗಳು ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು, ಕಾನೂನಿನ ತಿಳುವಳಿಕೆ ಯುವ ಜನಾಂಗಕ್ಕೆ ಅತ್ಯಗತ್ಯ ಎಂದು ಕೆ.ಡಿ.ದಯಾನಂದ ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಂಶುಪಾಲರದ ಡಿ.ಜೆ.ಜವರಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಯುವ ಒಕ್ಕೂಟದ ಅಧ್ಯಕ್ಷರಾದ ಸುಕುಮಾರ ಪಿ ಇತರರು ಇದ್ದರು. ಸಂತೋಷ್ ನಿರೂಪಿಸಿದರು, ಅರ್ಚನಾ ಪ್ರಾರ್ಥಿಸಿದರು, ಪಿ.ಸುಕುಮಾರ್ ಸ್ವಾಗತಿಸಿದರು ಮತ್ತು ಕನ್ನಿಕಾ ವಂದಿಸಿದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network