ಶ್ರೀಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ
ಶ್ರೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪ್ಪಯ್ಯನವರು 17-01-2022ರಂದು ಭೂಮಿಪೂಜೆ ನೇರವೇರಿಸಿದರು.
ಶ್ರೀಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಜ್ಜಮಾಡ ಟಿ. ಚಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಜಿ ಬೋಪ್ಪಯ್ಯನವರು ಸರ್ಕಾರದ ವತಿಯಿಂದ ಕಾಲಕಾಲಕ್ಕೆ ಮಂಜೂರಾಗುವ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳವಂತೆ ಕರೆ ನೀಡಿದರು.
ಸಂಘದ ಅಧ್ಯಕ್ಷರಾದ ಅಜ್ಜಮಾಡ ಟಿ. ಚಂಗಪ್ಪ ಮಾತನಾಡಿ ಆಡಳಿತ ಮಂಡಳಿ ಹಾಗೂ ಸದಸ್ಯರ ಒಮ್ಮತದಿಂದ ಸಂಘದ ಸ್ವಂತ ಜಾಗದಲ್ಲಿ ಉತ್ತಮ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಪಡೆಯಲಾಗಿದೆ. ಸರಿ ಸುಮಾರು ಅಂದಾಜು 1.16 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮೂರು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದ್ದು, ಮುಂದಿನ 6 ತಿಂಗಳಲ್ಲಿ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೊಡಗು ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ, ಹಿರಿಯ ಸಹಕಾರಿಗಳಾದ ಅಜ್ಜಮಾಡ ಕಟ್ಟಿ ಮಂದಯ್ಯ, ಶ್ರೀಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಜ್ಜಮಾಡ ಜಯ, ಉಪಾಧ್ಯಕ್ಷರಾದ ಕಲ್ಪನ, ಜಾಜಿ ಉತ್ತಪ್ಪ, ಎಂ.ಎಂ. ಚಂಗಪ್ಪ, ಚೋನಿರ ಸೋಮಯ್ಯ, ವಕೀಲರಾದ ಮಚ್ಚಮಾಡ ಕಾರ್ಯಪ್ಪ, ಕೊಡಗು ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ಶ್ರೀಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಐಯ್ಯಮಾಡ ಎ. ಉದಯ, ನಿರ್ದೇಶಕರಾದ ಕೆ.ಎನ್.ಸಂದೀಪ್, ಚೋನಿರ ಜೆ.ಕಾಳಯ್ಯ, ಅಜ್ಜಮಾಡ ಮೋಹನ್, ಮತ್ರಂಡ ಎಂ.ಮುತ್ತಪ್ಪ, ಚಟ್ಟಂಗಡ ಕೆ. ಗೀತಾ, ಅರೆಯಡ ಟಿ. ಬೊಳ್ಳಮ್ಮ, ಬಿ.ಆರ್. ಪುರುಷೋತ್ತಮ್, ಬಿ.ಆರ್. ಬೇಬಿ, ಕಾಳಿಮಾಡ ಎ, ಪ್ರಕಾಶ್, ಹೆಚ್.ಎಸ್. ಕೇತು, ಐಪುಮಾಡ ಎ. ದೇವಯ್ಯ, ಕಾಳಿಮಾಡ ಕೆ. ಬೆಳ್ಯಪ್ಪ, ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎಸ್.ಬಿ. ಯತಿರಾಜ್, ಸೇರಿದಂತೆ ಸಿಬ್ಬಂದಿಗಳು ಹಾಗೂ ಗ್ರಾಮದ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network