Header Ads Widget

ಸರ್ಚ್ ಕೂರ್ಗ್ ಮೀಡಿಯ

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ; ಪೂರ್ವಭಾವಿ ಸಭೆ

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ; ಪೂರ್ವಭಾವಿ ಸಭೆ


ಮಡಿಕೇರಿ: ಸ್ವಾತಂತ್ರ್ಯ ಭಾರತದ ಮೊದಲ ಸೇನಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಯಿತು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 123 ನೇ ಜನ್ಮ ದಿನಾಚರಣೆಯನ್ನು ಜನವರಿ, 28 ರಂದು ಆಚರಿಸುವ ಬಗ್ಗೆ ಚರ್ಚೆ ನಡೆಯಿತು. 

ಕೋವಿಡ್-19 ಹಿನ್ನೆಲೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. 

‘ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸುವುದು, ಹಾಗೆಯೇ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಕುರಿತು ಆನ್‍ಲೈನ್ ಮೂಲಕ ಪ್ರಬಂಧ ಸ್ಪರ್ಧೆ ಏರ್ಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.’   

ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸುವಂತಾಗಬೇಕು ಎಂದು ಫೋರಂ ಅಧ್ಯಕ್ಷರಾದ ಕರ್ನಲ್(ನಿವೃತ್ತ) ಸುಬ್ಬಯ್ಯ ಅವರು ಸಲಹೆ ಮಾಡಿದರು.  

ಮೇಜರ್(ನಿವೃತ್ತ) ಬಿದ್ದಂಡ ನಂಜಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಜನ್ಮ ದಿನಾಚರಣೆಗೆ ಸಂಬಂಧಿಸಿದಂತೆ ಹಲವು ಸಲಹೆ ನೀಡಿದರು.  

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಜಯಂತಿ ಆಚರಣೆ ಸಂಬಂಧ ಮಾಹಿತಿ ನೀಡಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ರಾಜುಮೊಗವೀರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೇದಮೂರ್ತಿ, ನಗರಸಭೆಯ ಎಇಇ ರಾಜೇಂದ್ರ ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಿಂದಿ ಉಪನ್ಯಾಸಕರಾದ ಖುರ್ಷಿದ್ ಬಾನು, ಸೈನಿಕ ಕಲ್ಯಾಣ ಇಲಾಖೆಯ ವಿಘ್ನೇಶ್ವರ್ ಇತರರು ಇದ್ದರು.  

ಇನ್ನಷ್ಟು ಮಾಹಿತಿ: ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 123 ನೇ ಜನ್ಮ ದಿನಾಚರಣೆಯು ಜನವರಿ, 28 ರಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜರುಗಲಿದೆ.  ದೇಶವು 75 ನೇ ಸ್ವಾತಂತ್ರ್ಯ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ದೇಶದ ಮೊದಲ ಮಹಾನ್ ದಂಡನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಿಗೆ ಅವರ 123 ನೇ ಜನ್ಮ ದಿನಾಚರಣೆಯಂದು ಗೌರವ ಸಮರ್ಪಣೆ ನಡೆಯಲಿದೆ.  

ಆ ಪ್ರಯುಕ್ತ ಪ್ರೌಢಶಾಲಾ ವಿಭಾಗ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಕುರಿತField marshal K.M.Cariappa Man of Discipline and Patriotism (ಆಂಗ್ಲ ಭಾಷೆಯಲ್ಲಿ ಬರೆಯುವವರಿಗೆ) ಅಥವಾ ಶಿಸ್ತಿನ ಸಿಪಾಯಿ ಹಾಗೂ ದೇಶಭಕ್ತ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ (ಕನ್ನಡ ಭಾಷೆಯಲ್ಲಿ ಬರೆಯುವವರಿಗೆ) ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.  

ಈ ಸ್ಪರ್ಧೆಯಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ಬಹುಮಾನ ನೀಡಲಾಗುವುದು.   ಪ್ರಬಂಧಗಳನ್ನು ಇ-ಮೇಲ್ FMCKODAGU123@gmail.com ಮೂಲಕ ಅಥವಾ ಹಾರ್ಡ್ ಕಾಫಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಭವನ, ಮಡಿಕೇರಿ ಈ ವಿಳಾಸಕ್ಕೆ ಜನವರಿ, 25 ರೊಳಗೆ ಕಳುಹಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ದರ್ಶನ್ ಅವರು  ಕೋರಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,