Header Ads Widget

Responsive Advertisement

ಪಿ.ಎಂ.ಕಿಸಾನ್ ನೋಂದಾಯಿತ ರೈತರು ಇ-ಕೆವೈಸಿ ಮಾಡಿಸುವ ಕುರಿತು

ಪಿ.ಎಂ.ಕಿಸಾನ್ ನೋಂದಾಯಿತ ರೈತರು ಇ-ಕೆವೈಸಿ ಮಾಡಿಸುವ ಕುರಿತು


ಮಡಿಕೇರಿ ಜ.06: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ 6 ಸಾವಿರಗಳನ್ನು ಪ್ರತಿ 4 ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸುಮಾರು 49582 ಜನ ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ  ಚಾಲ್ತಿಯಲ್ಲಿರುತ್ತದೆ. ಈ ಸಂಬಂಧ ಸದರಿ ಯೋಜನೆಯ ನೆರವು  ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಇ-ಕೆವೈಸಿ ಯನ್ನು ಎರಡು ವಿಧಾನಗಳಲ್ಲಿ ಕೈಗೊಳ್ಳಬಹುದಾಗಿದೆ:

ರೈತರು http://pmkisan.gov.xn--in-bvhzbi0bp1rtac/ Farmers Corner  ಇ-ಕೆವೈಸಿ ಅವಕಾಶದಡಿ ರೈತನ (ಈಗಾಗಲೇ ಪಿಎಂಕಿಸಾನ್  ಯೋಜನೆಯಡಿ  ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್‍ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್‍ನಲ್ಲಿ  ದಾಖಲಿಸಿ “SUBMIT FOR AUTH”  ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು e-KYC is “successfully submitted ಎಂಬ ವಾಕ್ಯವು ಗೋಚರಿಸುತ್ತದೆ.  

ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. ““e-KYC already done ಎಂಬ ಮಾಹಿತಿ ಗೋಚರಿಸುತ್ತದೆ).  ತಿಳಿಸಿದಂತೆ, ಯಾವ ಫಲಾನುಭವಿಯು ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿಗಾಗಿ ಕಳುಹಿಸಿದ ಒಟಿಪಿಯು ಸ್ವೀಕೃತವಾಗುದಿಲ್ಲವೋ ಅವರು ಸಿಎಸ್‍ಸಿ(Citizen service centres)- ನಾಗರಿಕ ಸೇವಾ ಕೇಂದ್ರಗಳಿಗೆ) ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿರುತ್ತದೆ.

ವಿಶೇಷ ಸೂಚನೆ: ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ (ಏಪ್ರಿಲ್ 22 ರಿಂದ ಜುಲೈ 22 ರವರೆಗೆ) ನೀಡುವ ಆರ್ಥಿಕ ನೆರವು ಪಡೆಯಲು 31 ನೇ ಮಾರ್ಚ್ 2022 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. 

ಹೆಚ್ಚಿನ ಮಾಹಿತಿಗೆ ರೈತರು ತಮ್ಮ  ಹತ್ತಿರದ ರೈತ ಸಂಪರ್ಕ ಕೇಂದ್ರ  ಅಥವಾ Citizen service centres s (ನಾಗರಿಕ ಸೇವಾ  ಕೇಂದ್ರ)ಗಳನ್ನು ಸಂಪರ್ಕಿಸಬಹುದು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,