ಮೇಕೇರಿಯಲ್ಲಿ ಸುಭಾಸ್ ಚಂದ್ರಬೋಸರ ಜನ್ಮದಿನ ಆಚರಣೆ
ಸ್ವಾಗತ ಯುವಕ ಸಂಘ (ರಿ) ಮೇಕೇರಿ ಇವರ ಆಯೋಜನೆಯಲ್ಲಿ ನೇತಾಜಿ ಸುಭಾಸ್ ಚಂದ್ರಬೋಸರ 125 ನೇ ಜನ್ಮದಿನ ಆಚರಣೆ ಕಾರ್ಯಕ್ರಮವನ್ನು ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದ ಅನ್ನಪೂರ್ಣ ಕಲಾಮಂದಿರದಲ್ಲಿ ಆಚರಿಸಲಾಯಿತು. ಆರಂಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರೂ ಸುಭಾಸ್ ಚಂದ್ರ ಬೋಸ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯದ ಕ್ರಾಂತ್ರಿಕಾರಿ ಹೋರಾಟಗಾರ ಸುಭಾಸ್ ಚಂದ್ರ ಬೋಸ್ ರವರ ಜೀವನದ ಆದರ್ಶಗಳ ಬಗ್ಗೆ ಪಿ.ವಿ.ರಾಜೇಂದ್ರ ಪ್ರಭುರವರು ವಿವರಿಸಿದರು. ಟಿ.ಎನ್. ಉಮೇಶ್ ಸುಭಾಸ್ ನಗರ ಇವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network