Header Ads Widget

ಸರ್ಚ್ ಕೂರ್ಗ್ ಮೀಡಿಯ

ಹುತಾತ್ಮರ ದಿನಾಚರಣೆ; ಪೂರ್ವಭಾವಿ ಸಭೆ

ಹುತಾತ್ಮರ ದಿನಾಚರಣೆ; ಪೂರ್ವಭಾವಿ ಸಭೆ 


ಮಡಿಕೇರಿ ಜ.27: ಇದೇ ಜನವರಿ, 30 ರಂದು ಹುತಾತ್ಮರ ದಿನಾಚರಣೆ ಹಿನ್ನೆಲೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ಮೆರವಣಿಗೆ ಮೂಲಕ ಗಾಂಧಿ ಮೈದಾನಕ್ಕೆ ತೆಗೆದುಕೊಂಡು ಹೋಗುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಸರ್ವೋದಯ ಸಮಿತಿ ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜನವರಿ, 30 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಿಂದ ಮೆರವಣಿಗೆಯಲ್ಲಿ ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದಲ್ಲಿರಿಸಿ ಬೆಳಗ್ಗೆ 10.30 ಗಂಟೆಗೆ ಸರ್ವಧರ್ಮ ಪ್ರಾರ್ಥನೆ, ನಂತರ 11 ಗಂಟೆಗೆ ಸರಿಯಾಗಿ 2 ನಿಮಿಷ ಮೌನ ಆಚರಣೆ ನಡೆಯಲಿದೆ ಎಂದು ತಿಳಿಸಿದರು. 

ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿ ಸ್ಮಾರಕ ನಿರ್ಮಾಣ ಸಂಬಂಧ 50 ಲಕ್ಷ ರೂ. ಬಿಡುಗಡೆಗೆ ಸರ್ಕಾರ ಆದೇಶ ಹೊರಡಿಸಿದೆ. ಆ ನಿಟ್ಟಿನಲ್ಲಿ 35 ಸೆಂಟ್ ಜಾಗವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಹಸ್ತಾಂತರಿಸಿ, ಗಾಂಧೀಜಿ ಸ್ಮಾರಕ ನಿರ್ಮಾಣಕ್ಕೆ ಕ್ರಮವಹಿಸಬೇಕಿದೆ ಎಂದು ಟಿ.ಪಿ.ರಮೇಶ್ ಅವರು ಕೋರಿದರು. 

1934 ರಲ್ಲಿ ಮಹಾತ್ಮ ಗಾಂಧೀಜಿ ಅವರು ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಆ ಹಿನ್ನೆಲೆ ಗಾಂಧಿ ಮೈದಾನ ಎಂದು ಹೆಸರು ಬಂದಿದೆ. ಮಹಾತ್ಮ ಗಾಂಧೀಜಿಯವರು ಭಾಷಣ ಮಾಡಿದ ಸ್ಥಳದಲ್ಲಿ ಗಾಂಧಿ ಮಂಟಪ ನಿರ್ಮಾಣ ಮಾಡಲಾಗಿದೆ ಎಂದು ಅವರು ಹೇಳಿದರು. 

ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಕೊಡಗು ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ತಂದು ಜಿಲ್ಲಾ ಖಜಾನೆಯಲ್ಲಿ ಇರಿಸಿದ್ದಾರೆ ಎಂದು ಟಿ.ಪಿ.ರಮೆಶ್ ಅವರು ಮಾಹಿತಿ ನೀಡಿದರು.   

ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಸದಸ್ಯರಾದ ಎಸ್.ಪಿ.ವಾಸುದೇವ್, ನವೀನ್ ಅಂಬೆಕಲ್ಲು, ಎಚ್.ಕೆ.ಪ್ರೇಮ, ಖಜಾನೆ ಇಲಾಖೆಯ ಸಹಾಯಕ ಖಜಾನಾಧಿಕಾರಿ ಕೆ.ಆರ್.ಕಲ್ಪನಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಮನ್ವಯಾಧಿಕಾರಿ ದಮಯಂತಿ, ಮಣಜೂರು ಮಂಜುನಾಥ್ ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,