ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕ್ಯಾಲೆಂಡರ್ ಬಿಡುಗಡೆ
ಪೊನ್ನಂಪೇಟೆ, ಜ.17: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಉದ್ಯಮಿ ಅಕ್ಕಳತಂಡ ಎಸ್.ಮೊಯ್ದು ಅವರ ಪ್ರಾಯೋಜಕತ್ವದಲ್ಲಿ ಹೊರತರಲಾದ ಪ್ರಸಕ್ತ ಸಾಲಿನ ಕ್ಯಾಲೆಂಡರ್ (ದಿನದರ್ಶಿ) ಅನ್ನು ಸೋಮವಾರ ಬಿಡುಗಡೆಗೊಳಿಸಲಾಯಿತು.
ವಿರಾಜಪೇಟೆಯಲ್ಲಿರುವ ಕೆ. ಎಂ. ಎ. ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರು, ಜಿಲ್ಲೆಯ ಹಿರಿಯ ಧಾರ್ಮಿಕ ವಿದ್ವಾಂಸರೂ ಆಗಿರುವ ಸಂಸ್ಥೆಯ ಹಿರಿಯ ಸಲಹೆಗಾರರಾದ ಅಬುಸೈಯದ್ ಪಾಯಡತಂಡ ಎಂ. ಹುಸೈನ್ ಮುಸ್ಲಿಯಾರ್ ಅವರಿಗೆ ನೂತನ ಕ್ಯಾಲೆಂಡರ್ ನ ಪ್ರತಿಯನ್ನು ನೀಡುವುದರ ಮೂಲಕ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರು, ಸಂಸ್ಥೆಯ ವತಿಯಿಂದ ಕಳೆದ 5 ವರ್ಷಗಳಿಂದ ಹೊರತರಲಾಗುತ್ತಿರುವ ಕ್ಯಾಲೆಂಡರ್ ಹೆಚ್ಚು ಉಪಯುಕ್ತವಾಗುತ್ತಿದೆ. ಇದನ್ನು ನಿರಂತರವಾಗಿ ಪ್ರಾಯೋಜಿಸುತ್ತಿರುವ ಅಕ್ಕಳತಂಡ ಎಸ್.ಮೊಯ್ದು ಅವರ ಸಾಮಾಜಿಕ ಸೇವೆ ಶ್ಲಾಘನೀಯ ಎಂದರು.
ಪಾಯಡತಂಡ ಎಂ. ಹುಸೈನ್ ಮುಸ್ಲಿಯಾರ್ ಅವರು ಮಾತನಾಡಿ, ಸೇವೆ ಮಾಡಲು ಯಾವುದೇ ನಿರ್ದಿಷ್ಟ ಆಯಾಮಗಳಿಲ್ಲ. ನಿಸ್ವಾರ್ಥವಾಗಿ ಮಾಡುವ ಜನೋಪಯೋಗಿ ಸೇವೆ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ನಿವೃತ್ತ ಉಪ ತಹಶೀಲ್ದಾರ್, ವಿರಾಜಪೇಟೆಯ ಚಿಮ್ಮಿಚೀರ ಅಬ್ದುಲ್ಲಾ ಹಾಜಿ, ವಿರಾಜಪೇಟೆ ತಾ.ಪಂ. ಮಾಜಿ ಸದಸ್ಯರಾದ ಗುಂಡಿಕೆರೆಯ ಕುವೇಂಡ ವೈ. ಆಲಿ, ಹೊದವಾಡದ ಹರಿಶ್ಚಂದ್ರ ಎ. ಹಂಸ, ಬೇಗೂರಿನ ಆಲೀರ ಅಹ್ಮದ್ ಹಾಜಿ, ಹಳ್ಳಿಗಟ್ಟಿನ ಚಿಮ್ಮಿಚೀರ ಕೆ. ಇಬ್ರಾಹಿಂ, ಚಾಮಿಯಾಲದ ಪುದಿಯಾಣೆರ ಹನೀಫ್, ಕೊಟ್ಟೋಳಿಯ ಮಿತಲತಂಡ ಎಂ. ಇಸ್ಮಾಯಿಲ್, ಬೇಟೋಳಿಯ ಮಂಡೇಡ ಎ. ಮೊಯ್ದು, ಪೊನ್ನಂಪೇಟೆ ಗ್ರಾ.ಪಂ. ಸದಸ್ಯ ಆಲೀರ ಎಂ. ರಶೀದ್ ಮೊದಲಾದವರು ಪಾಲ್ಗೊಂಡಿದ್ದರು. ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ ಕಾರ್ಯಕ್ರಮ ನಿರ್ವಹಿಸಿದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network