Header Ads Widget

ಸರ್ಚ್ ಕೂರ್ಗ್ ಮೀಡಿಯ

ಮಾ.12 ರಂದು ‘ರಾಷ್ರ್ಟೀಯ ಲೋಕ್ ಅದಾಲತ್’ ಸದುಪಯೋಗಕ್ಕೆ ಜಿಲ್ಲಾ ನ್ಯಾಯಾಧೀಶರ ಕರೆ

ಮಾ.12 ರಂದು ‘ರಾಷ್ರ್ಟೀಯ ಲೋಕ್ ಅದಾಲತ್’ ಸದುಪಯೋಗಕ್ಕೆ ಜಿಲ್ಲಾ ನ್ಯಾಯಾಧೀಶರ ಕರೆ


ಮಡಿಕೇರಿ ಫೆ.17: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಮಾರ್ಚ್ 12 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ರ್ಟೀಯ ಲೋಕ್ ಅದಾಲತ್’ ನಡೆಯಲಿದ್ದು, ಸಂಬಂಧಪಟ್ಟವರು ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಭೀಮರಾವ್ ಜಿನರಾಳಕರ್ ಲಗಮಪ್ಪ ಅವರು ತಿಳಿಸಿದ್ದಾರೆ. 

ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಲೋಕ ಅದಲಾತ್‍ನಲ್ಲಿ ಹಲವು ಪ್ರಕರಣಗಳನ್ನು ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಇತ್ಯರ್ಥಪಡಿಸಲಾಗುವುದು ಎಂದರು. 

       ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಆರ್ಥಿಕ ವಸೂಲಾತಿ ಪ್ರಕರಣಗಳು. ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು. ವಿದ್ಯುತ್ ಹಾಗೂ ನೀರಿನ ಶುಲ್ಕಗಳು (ನಾನ್ ಕಾಂಪೌಂಡಬಲ್ ಹೊರತುಪಡಿಸಿ). ಮೈನ್‍ಟೆನೆನ್ಸ್ ಪ್ರಕರಣಗಳು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಇತರ ಪ್ರಕರಣಗಳು ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ವಿವರಿಸಿದರು. 

       ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಆರ್ಥಿಕ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು (ನಾನ್ ಕಾಂಪೌಂಡಬಲ್ ಹೊರತುಪಡಿಸಿ), ವೈವಾಹಿಕ/ ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ ಪ್ರಕರಣಗಳು (ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಾಜ್ಞೆ ಮೊಕದ್ದಮೆಗಳು).

      ಎಲ್ಲಾ ಸಾರ್ವಜನಿಕರಿಗೆ, ಕಕ್ಷಿದಾರರಿಗೆ, ಬ್ಯಾಂಕ್‍ಗಳಿಗೆ ಮತ್ತು ಹಣಕಾಸು ಸಂಸ್ಥೆಗಳಿಗೆ ಹಾಗೂ ಇತರೆ ಸಂಘ ಸಂಸ್ಥೆಗಳಿಗೆ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣವಕಾಶವಾಗಿದೆ ಎಂದು ಭೀಮರಾವ್ ಜಿನರಾಳಕರ್ ಲಗಮಪ್ಪ ಅವರು ಹೇಳಿದರು.  

     ಪ್ರತಿ ದಿನ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠೆಕ್‍ಗಳನ್ನು ಹಮ್ಮಿಕೊಂಡು ನ್ಯಾಯಾಧೀಶರು ಮತ್ತು ನುರಿತ ವಕೀಲರು ಮಧ್ಯಸ್ಥಿಕೆ ವಹಿಸಿ ಉಭಯ ಪಕ್ಷಕಾರರು ತಮ್ಮ ಪ್ರಕರಣವನ್ನು ಬಗೆಹರಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಸಂಪೂರ್ಣವಾಗಿ ಮರು ಪಾವತಿಸಲಾಗುವುದು ಎಂದರು. 

       ಈ ಆದೇಶದ ವಿರುದ್ಥ ಯಾವುದೇ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಒಂದು ವೇಳೆ ಕೋವಿಡ್ ಕಾರಣದಿಂದಾಗಿ ಕಕ್ಷಿದಾರಿಗೆ ನ್ಯಾಯಾಲಯಕ್ಕೆ ಖುದ್ದಾಗಿ ಬರಲು ಸಾದ್ಯವಾಗದಿದ್ದರೆ ಆನ್‍ಲೈನ್ ಅಥವಾ ವಿಡಿಯೋ ಕಾನ್ಪರೆನ್ಸ್ ಮುಖಾಂತರವೂ ತಮ್ಮ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಡಿಕೇರಿ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿ ವಿರಾಜಪೇಟೆ ಮತ್ತು ಸೋಮವಾರಪೇಟೆ, ಸಹಾಯವಾಣಿ ಸಂಖ್ಯೆ  08272-222373 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೇಳಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ಇದ್ದರು. ಹೆಚ್ಚಿನ ಮಾಹಿತಿಗೆ ಕ್ಯೂಆರ್ ಕೋಡ್‍ನ್ನು ಗಮನಿಸಬಹುದಾಗಿದೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,