Header Ads Widget

ಸರ್ಚ್ ಕೂರ್ಗ್ ಮೀಡಿಯ

ಫೆ.21 ರಂದು ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಕುರಿತು ಶಿಕ್ಷಣ ಕಾರ್ಯಕ್ರಮ

ಫೆ.21 ರಂದು ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಕುರಿತು ಶಿಕ್ಷಣ ಕಾರ್ಯಕ್ರಮ


ಮಡಿಕೇರಿ ಫೆ.18: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಸಹಕಾರ ದವಸ ಭಂಡಾರ, ಹಾಲು ಉತ್ಪಾದಕರ ಸಹಕಾರ ಸಂಘ, ಮಹಿಳಾ ಮತ್ತು ಇತರೆ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಲೆಕ್ಕಪತ್ರ ನಿರ್ವಹಣೆ ಹಾಗೂ ಇತ್ತೀಚಿನ ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಕುರಿತು ಶಿಕ್ಷಣ ಕಾರ್ಯಕ್ರಮವು ಫೆಬ್ರವರಿ, 21 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಕೆ.ಎ.ಸುಬ್ರಮಣಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಉಪಾಧ್ಯಕ್ಷರಾದ ಪಿ.ಸಿ.ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಸಿಇಒ ಯೋಗೇಂದ್ರ ನಾಯಕ ಇತರರು ಪಾಲ್ಗೊಳ್ಳಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕರಾದ ಬಿ.ಕೆ.ಸಲೀಂ ಮತ್ತು ಸಹಕಾರ ಸಂಘಗಳ ಹಿರಿಯ ಲೆಕ್ಕಪರಿಶೋಧಕರಾದ(ನಿವೃತ್ತ) ಡಿ.ಎನ್.ಚಂದ್ರಶೇಖರ್ ಅವರು ಉಪನ್ಯಾಸ ನೀಡಲಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,