ಮಾ.25, 26 ಹಾಗೂ 27 ರಂದು ಚೆಟ್ಟಳ್ಳಿ ಪ್ರೌಢ ಶಾಲಾ ಮೈದಾನದಲ್ಲಿ‘ಚೇರಳ ಗೌಡ ಕಪ್’ ಫುಟ್ಬಾಲ್ ಪಂದ್ಯಾವಳಿ
ಚೇರಳ ಗೌಡ ಸಂಘದ ವತಿಯಿಂದ ಗೌಡ ಕುಟುಂಬಗಳ ನಡುವೆ ಮಾ.25, 26 ಹಾಗೂ 27 ರಂದು ಚೆಟ್ಟಳ್ಳಿ ಪ್ರೌಢ ಶಾಲಾ ಮೈದಾನದಲ್ಲಿ ‘ಚೇರಳ ಗೌಡ ಕಪ್’ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಯ್ಯಂಡ್ರ ರಾಘವಯ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌಡ ಕುಟುಂಬಗಳ ನಡುವೆ ಮೂರು ದಿನಗಳ ಕಾಲ 5+2 ಆಟಗಾರರ ತಂಡಗಳ ತಂಡಗಳ ನಡುವೆ ಪಂದ್ಯಾವಳಿ ನಡೆಯಲಿದೆ. ಪ್ರಥಮ ಸ್ಥಾನ ಪಡೆದ ತಂಡಕ್ಕೆ 22,222 ರೂ., ದ್ವೀತಿಯ ಸ್ಥಾನ ಪಡೆದ ತಂಡಕ್ಕೆ 15,555 ರೂ., ತೃತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ರೂ.5,555 ನಗದು ಬಹುಮಾನಗಳೊಂದಿಗೆ ಆಕರ್ಷಕ ಟ್ರೋಫಿ ನೀಡಲಾಗುವುದೆಂದರು.
ಭಾಗವಹಿಸುವ ತಂಡಗಳು ಮಾ.18ರ ಒಳಗೆ ಮೈದಾನ ಶುಲ್ಕ 2 ಸಾವಿರ ರೂ.ಗಳನ್ನು ನೀಡಿ ತಂಡದ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.
ಯುವ ಬ್ರಿಗೇಡ್ ಸಮಿತಿಯ ಕಾರ್ಯದರ್ಶಿ ಪೇರಿಯನ ಉದಯ ಮಾತನಾಡಿ, ಸಂಘದ ಯುವ ಬ್ರಿಗೇಡ್ ಸಮಿತಿ ಮತ್ತು ಕ್ರೀಡಾ ಸಮಿತಿ ಫುಟ್ಬಾಲ್ ಪಂದ್ಯಾವಳಿ ಆಯೋಜನೆಯ ಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಪ್ರತಿ ತಂಡಕ್ಕೆ ನೀಡಲಾಗುವ ನಿಯಮ ಮತ್ತು ನಿಬಂಧನೆಗೊಳಪಟ್ಟು ಎಲ್ಲಾ ತಂಡಗಳು ಭಾಗವಹಿಸಬೇಕಾಗುತ್ತದೆ. ತಕರಾರುಗಳಿದ್ದಲ್ಲಿ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ 9901237900, 8197297516, 9481946076 ಸಂಪರ್ಕಿಸಬಹುದಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯದರ್ಶಿ ಅಜೀರ ಧನಂಜಯ, ಖಜಾಂಚಿ ಮುಕ್ಕಟಿ ಪಳಂಗಪ್ಪ, ಯುವ ಬ್ರಿಗೇಡ್‍ನ ಖಜಾಂಚಿ ಮರದಾಳು ತೇಜಸ್ ಹಾಗೂ ಸದಸ್ಯ ಚೇತನ್ ಉಪಸ್ಥಿತರಿದ್ದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network