ಫೆ.28 ರಂದು ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ‘ಅಂತ್ಯೋದಯ’ ರಾಜ್ಯ ಮಟ್ಟದ ಮಾಹಿತಿ ಕಾರ್ಯಾಗಾರ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಫೆಬ್ರವರಿ, 28 ರಂದು ಬೆಳಗ್ಗೆ 10 ಗಂಟೆಗೆ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಕಲ್ಯಾಣ ಇಲಾಖೆಗಳ ವಿವಿಧ ಯೋಜನೆಗಳ ಕುರಿತ ರಾಜ್ಯ ಮಟ್ಟದ ಮಾಹಿತಿ ಕಾರ್ಯಗಾರ ಕಾರ್ಯಕ್ರಮಕ್ಕೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಚಾಲನೆ ನೀಡಲಿದ್ದಾರೆ ಎಂದರು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರ ಘನ ಉಪಸ್ಥಿತಿಯಲ್ಲಿ ಹಾಗೆಯೇ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಎಸ್.ರವಿ ಕುಶಾಲಪ್ಪ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಸುಜಾ ಕುಶಾಲಪ್ಪ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕೊಡಗು ಮತ್ತು ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಹಿಂದುಳಿದ ವರ್ಗಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರವಿಕುಮಾರ್ ಸುರಪುರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ಕೆ.ಎ.ದಯಾನಂದ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಪಿ.ಎಸ್.ಕಾಂತರಾಜು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಾದ ರಮೇಶ್ ದೇಸಾಯಿ, ಎಸ್‍ಸಿಎಸ್‍ಪಿ/ ಟಿಎಸ್‍ಪಿ ಕೋಶದ ನಿರ್ದೇಶಕರಾದ ಊರ್ಮಿಳಾ ಬಿ. ಇತರರು ಆಗಮಿಸಲಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ರಾಜ್ಯ ಮಟ್ಟದ ಮಾಹಿತಿ ಕಾರ್ಯಾಗಾರವು ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜರುಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಇದ್ದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network