Header Ads Widget

Responsive Advertisement

ಸೋಮವಾರಪೇಟೆ ತಾಲ್ಲೂಕಿನ 30 ಅರಣ್ಯ ಹಕ್ಕು ಪತ್ರಕ್ಕೆ ಡಿಸಿ ಅನುಮೋದನೆ

ಸೋಮವಾರಪೇಟೆ ತಾಲ್ಲೂಕಿನ 30 ಅರಣ್ಯ ಹಕ್ಕು ಪತ್ರಕ್ಕೆ ಡಿಸಿ ಅನುಮೋದನೆ


ಮಡಿಕೇರಿ ಫೆ.16; ಅನುಸೂಚಿತ ಬುಡಕಟ್ಟು ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಅಧಿನಿಯಮ ಅನುಷ್ಠಾನ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ 30 ಅರಣ್ಯ ಹಕ್ಕು ಪತ್ರಗಳಿಗೆ ಅನುಮೋದನೆ ನೀಡಲಾಯಿತು. 

      ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪರಿಶಿಷ್ಟ ಪಂಗಡದ 5 ವೈಯಕ್ತಿಕ ಅರಣ್ಯ ಹಕ್ಕುಪತ್ರ ಹಾಗೂ ಇತರೆ ಪಾರಂಪರಿಕ ಅರಣ್ಯ ವಾಸಿಗಳ 25 ಅರಣ್ಯ ಹಕ್ಕು ಪತ್ರಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಅನುಮೋದನೆ ನೀಡಿದರು.  

      ಉಳಿದಂತೆ ಮಡಿಕೇರಿ ತಾಲ್ಲೂಕಿನ 32 ಮತ್ತು ವಿರಾಜಪೇಟೆ ತಾಲ್ಲೂಕಿನ 50 ಅರಣ್ಯ ಹಕ್ಕು ಪತ್ರಗಳ ಅರ್ಜಿಗಳ ಸಂಬಂಧ ಪುನರ್ ಪರಿಶೀಲಿಸಿ 15 ದಿನದೊಳಗೆ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯ ಮುಂದಿಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದರು.  

      ಪ್ರತಿಯೊಂದು ಅರ್ಜಿಗಳಿಗೆ ಸಂಬಂಧಿಸಿದಂತೆ ಅರಣ್ಯ ಹಕ್ಕು ಕಾಯ್ದೆಯ ಸಂಬಂಧ ನಿಖರ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. 

      ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ನಿರ್ದೇಶಕರಾದ ಶ್ರೀನಿವಾಸ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ದಯಾನಂದ, ನೆಹರು, ಪಾಷಾ, ಉತ್ತಪ್ಪ, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ತಾ.ಪಂ.ಇಒಗಳಾದ ಅಪ್ಪಣ್ಣ, ಜಯಣ್ಣ, ಐಟಿಡಿಪಿ ಪೊನ್ನಂಪೇಟೆ ತಾಲ್ಲೂಕು ಅಧಿಕಾರಿ ಗುರುಶಾಂತಪ್ಪ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಬಾಲಕೃಷ್ಣ ರೈ, ಚಂದ್ರಪ್ಪ, ಕೊಡಗು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,