Header Ads Widget

ಸರ್ಚ್ ಕೂರ್ಗ್ ಮೀಡಿಯ

ಖಾಸಗಿ ಬಸ್ ನಿಲ್ದಾಣದ ‘ಉದ್ಯಾನವನ’ ಉದ್ಘಾಟನೆ

ಖಾಸಗಿ ಬಸ್ ನಿಲ್ದಾಣದ ‘ಉದ್ಯಾನವನ’ ಉದ್ಘಾಟನೆ 


ಮಡಿಕೇರಿ ಫೆ.11; ಮಡಿಕೇರಿ ನಗರಸಭೆ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿ ಹೊಸದಾಗಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಉದ್ಯಾನವನವನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಉದ್ಘಾಟಿಸಿದರು. 

2020-21 ನೇ ಸಾಲಿನ ಹಣಕಾಸು ಆಯೋಗದ ಅನುದಾನದಡಿ ನಿರ್ಮಿಸಲಾಗಿರುವ ಉದ್ಯಾನವನ ಉದ್ಘಾಟಿಸಿದ ಬಳಿಕ ಮಾತನಾಡಿದ ಶಾಸಕರು ನಗರದ ಎಲ್ಲೆಡೆ ಹೆಚ್ಚಿನ ಮರಗಿಡ ಬೆಳೆಸಿ, ಹಸಿರೀಕರಣ ಮಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 

ನಗರದ ಸ್ವಚ್ಛತೆ, ಪರಿಸರ ಉಳಿಸುವಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದು ಶಾಸಕರು ಹೇಳಿದರು. ಬಳಿಕ ಖಾಸಗಿ ಬಸ್ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ಮಳಿಗೆ ಕಾಮಗಾರಿ ವೀಕ್ಷಿಸಿದರು. ನಂತರ ವಾಹನ ನಿಲುಗಡೆಗೆ ಗುರುತಿಸಲಾಗಿರುವ ಸ್ಥಳ ಪರಿಶೀಲಿಸಿದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ನಗರಸಭೆ ಸದಸ್ಯರು ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,