ದೇಯಿ ಬೈದ್ಯೆತಿ–ಕೋಟಿ ಚೆನ್ನಯರ ಪುಣ್ಯ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ನೇಮೋತ್ಸವ ಸಮಿತಿ ಗೌರವಾಧ್ಯಕ್ಷರಾದ ಚಿತ್ತರಂಜನ್ ಕಂಕನಾಡಿ ಮಾರ್ಗದರ್ಶನದಲ್ಲಿ ಜರಗಿದ ಸಭೆಯಲ್ಲಿ ಆಮಂತ್ರಣ ಪತ್ರಿಕೆಯನ್ನು ಜಿಲ್ಲೆಗಳ ವ್ಯಾಪ್ತಿಯಲ್ಲಿ ಶ್ರೀ ಕ್ಷೇತ್ರದ ಭಕ್ತಾಭಿಮಾನಿಗಳಿಗೆ ಸ್ಥಳೀಯ ಸಮಾಜದ ಸಂಘ ಸಂಸ್ಥೆಗಳ ಮೂಲಕ ತಲುಪಿಸಿ ಅನ್ಯ ರಾಜ್ಯಗಳಲ್ಲಿ ಹಾಗೂ ವಿದೇಶಗಳಲ್ಲಿ ನೆಲೆಸಿರುವ ಭಕ್ತರಿಗೆ ವಾಟ್ಸಾಪ್ ಹಾಗೂ ಇತರ ಆನ್ಲೈನ್ ಮಾಧ್ಯಮಗಳ ಮೂಲಕ ವಿಶ್ವಾದ್ಯಂತ ನೆಲೆಸಿರುವ ಶ್ರೀ ಕ್ಷೇತ್ರದ ಭಕ್ತಾಭಿಮಾನಿಗಳಿಗೆ ತಲುಪಿಸಿ ಈ ಮಹೋತ್ಸವಕ್ಕೆ ಆಮಂತ್ರಿಸಲು ತೀರ್ಮಾನಿಸಲಾಯಿತು.
ಜಾತ್ರಾ ಮಹೋತ್ಸವದ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನಲ್ಲಿ ಮಾರ್ಚ್ 3 ಬೆಳಿಗ್ಗೆ 11ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರಾರಂಭಗೊಂಡು ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ ಮೂಲಕ ಮಧ್ಯಾಹ್ನ 1ಕ್ಕೆ ಪುತ್ತೂರು ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಂಘ ತಲುಪಿ ಅಲ್ಲಿಂದ ಮಧ್ಯಾಹ್ನ 2 ಕ್ಕೆ ವಿವಿಧೆಡೆ ಗಳಿಂದ ಆಗಮಿಸುವ ಹೊರೆಕಾಣಿಕೆ ಮೆರವಣಿಗೆ ಜೊತೆಯಾಗಿ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಹೊರಡಲಿದೆ.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ವಿಶ್ವಬಿಲ್ಲವರ ಪಾಲ್ಗೊಳ್ಳುವಿಕೆಯಿಂದ ನಿರ್ಮಾಣ ಗೊಂಡ ಮಹಾ ಮಾತೆ ದೇಯಿ ಬೈದೆತಿ, ಕೋಟಿ ಚೆನ್ನಯರ ಪ್ರಮುಖ ಆರಾಧನಾ ಸ್ಥಳವಾಗಿದೆ.
ವಿಶ್ವಬಿಲ್ಲವರು ತಮ್ಮ ಸಮರ್ಪಣಾ ಭಾವದಿಂದ ಶ್ರೀ ಕ್ಷೇತ್ರವನ್ನು ನಿರ್ಮಿಸಿದ್ದಾರೆ ಹಾಗೂ ಇಂದು ಜಾತಿ ಮತವನ್ನು ಮೀರಿ ಲಕ್ಷಾಂತರ ದೇಯಿ ಬೈದೆತಿ, ಕೋಟಿ ಚೆನ್ನಯರ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಇಲ್ಲಿಯ ಕಾರ್ಣಿಕ ಶಕ್ತಿಗಳ ಆಶೀರ್ವಾದವನ್ನು ಪಡೆಯುತ್ತಿದ್ದಾರೆ ಎಂದರು.
ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಪ್ರಾಸ್ತಾವಿಕವಾಗಿ ಮಾತನಾಡಿ ಪುತ್ತೂರು ಪ್ರದೇಶಕ್ಕೆ ಸೀಮಿತವಾಗಿದ್ದ ಪಡುಮಲೆಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ನಂತರ ಧಾರ್ಮಿಕತೆಯ ಜೊತೆ ಸಾಮಾಜಿಕ ಜಾಗ್ರತಿಯ ಮೂಲಕ ಜಿಲ್ಲೆ ರಾಜ್ಯ ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದ ಪರಮಪಾವನ ಪುಣ್ಯಕ್ಷೇತ್ರವಾಯಿತು ಎಂದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network