Header Ads Widget

ಸರ್ಚ್ ಕೂರ್ಗ್ ಮೀಡಿಯ

ಚೆಟ್ಟಳ್ಳಿ ಫ್ಯಾಕ್ಸ್‌ನಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಪೂಜಾ ಕಾರ್ಯಕ್ರಮ

ಚೆಟ್ಟಳ್ಳಿ ಫ್ಯಾಕ್ಸ್‌ನಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಪೂಜಾ ಕಾರ್ಯಕ್ರಮ


ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘ, ಜನಪರ ಹೋರಾಟ ಸಮಿತಿ ಚೆಟ್ಟಳ್ಳಿ, ವೀರಾಂಜನೇಯ ಯುವಕ ಸಂಘ ಚೆಟ್ಟಳ್ಳಿ ಹಾಗೂ ವಿನಾಯಕ ದೇವಾಲಯ ಸಮಿತಿ ಕೂಡ್ಲೂರು ಇವರ ಸಂಯುಕ್ತಾಶ್ರಯದಲ್ಲಿ ದ್ವಿತೀಯ ವರ್ಷದ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಎಂದು ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪ  ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ  ನೀಡಿರುವ ಅವರು, ಮಾ.1 ರ ಮಂಗಳವಾರ ಸಂಜೆ 5.30 ಗಂಟೆಗೆ ಶ್ರೀ ವಿನಾಯಕ, ಶ್ರೀ ಪಶುಪತಿನಾಥ, ಶ್ರೀ ಕಾವೇರಿ ಮಾತೆ, ಶ್ರೀ ಕೃಷ್ಣ ,ಗೋಮಾತೆ, ಶ್ರೀ ಆಂಜನೇಯ, ಮತ್ತು ಶ್ರೀ ಮಹಾವಿಷ್ಣು ಮೂರ್ತಿಗೆ ಮಹಾ ಮಂಗಳಾರತಿ ನಡೆಯಲಿದೆ.

ಸಂಜೆ 7 ಗಂಟೆಯಿಂದ ಗೋಣಿಕೊಪ್ಪಲಿನ ಯುವ ಗಾಯಕರಾದ ಅನ್ವಿತ್ ಕುಮಾರ್ ಸಿ.ವಿ ರವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.30 ಗಂಟೆಗೆ ಪ್ರಸಾದ ಹಾಗೂ ಅನ್ನ ಸಂತರ್ಪಣಾ ಕಾರ್ಯಕ್ರಮ ನಡೆಯಲಿದ್ದು ಎಲ್ಲಾ ಭಕ್ತಾಧಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ  ಬಲ್ಲಾರಂಡ ಮಣಿ ಉತ್ತಪ್ಪ  ತಿಳಿಸಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,