Header Ads Widget

ಸರ್ಚ್ ಕೂರ್ಗ್ ಮೀಡಿಯ

ಕೊಡಗು ಮೂಲನಿವಾಸಿಗಳ ಸಾಂವಿಧಾನಿಕ ಹಕ್ಕು ಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಕೊಡಗು ಮೂಲನಿವಾಸಿಗಳ ಸಾಂವಿಧಾನಿಕ ಹಕ್ಕು ಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ನೂತನ ಸಮಿತಿ ಅಧ್ಯಕ್ಷರಾದ ಡಾ. ಮೇಚಿರ ಸುಭಾಷ್ ನಾಣಯ್ಯ ಅವಿರೋಧ ಆಯ್ಕೆ

( ಡಾ. ಮೇಚಿರ ಶುಭಾಷ್ ನಾಣಯ್ಯ )

ಮಡಿಕೇರಿ: ಕೊಡಗು ಜಿಲ್ಲೆಯ ಮೂಲನಿವಾಸಿಗಳ ಹಕ್ಕುಗಳನ್ನು ಸಂರಕ್ಷಿಸುವ ಮತ್ತು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲು 'ಕೊಡಗು ಮೂಲನಿವಾಸಿಗಳ ಸಾವಿಧಾನಿಕ ಹಕ್ಕು ಸಂರಕ್ಷಣಾ ಸಮಿತಿ'ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಈ ನೂತನ ಸಮಿತಿಯ ಅಧ್ಯಕ್ಷರಾಗಿ ಮೂರ್ನಾಡಿನ ಡಾ. ಮೇಚಿರ ಸುಭಾಷ್ ನಾಣಯ್ಯ ಅವರನ್ನು ಅವಿರೋಧವಾಗಿ ಆಯ್ಕೆಗೊಳಿಸಲಾಗಿದೆ.

ಭಾನುವಾರದಂದು ಮಡಿಕೇರಿಯ ಕೊಡಗು ಗೌಡ ಸಮಾಜಗಳ ಒಕ್ಕೂಟ ವತಿಯಿಂದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಒಕ್ಕೂಟದ ಸಭಾಂಗಣದಲ್ಲಿ ನಡೆದ ಕೊಡಗು ಮೂಲನಿವಾಸಿ ವಿವಿಧ ಸಮುದಾಯದ  ಪ್ರತಿನಿಧಿಗಳ ಮಹತ್ವದ ಸಭೆಯಲ್ಲಿ ನೂತನ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಅವರನ್ನು ಈ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಗೊಳಿಸಲಾಯಿತು.  ಉಪಾಧ್ಯಕ್ಷರುಗಳಾಗಿ ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷರಾದ ಹಿರಿಯ ವಕೀಲ ಪಡಿಂಜ್ಹರಂಡ ಜಿ. ಅಯ್ಯಪ್ಪ, ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ. ಎಂ. ಎ.) ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ, ಕೊಡಗು ಐರಿ ಸಮಾಜದ ಅಧ್ಯಕ್ಷರಾದ ಬಬ್ಬಿರ ಸರಸ್ವತಿ, ಸವಿತಾ ಸಮಾಜದ ವೇದಪಂಡ ಕಿರಣ್ ಅವರನ್ನು ಸಭೆ ಅವಿರೋಧವಾಗಿ ಆಯ್ಕೆಗೊಳಿಸಿತು. ಅಲ್ಲದೆ, ಕೊಡಗಿನ ಎಲ್ಲಾ ಮೂಲನಿವಾಸಿ ಸಮುದಾಯಗಳ  ಪ್ರತಿನಿಧಿಗಳನ್ನು ಸಮಿತಿಗೆ ಆಯ್ಕೆಗೊಳಿಸಲು ನಿರ್ಧರಿಸಲಾಯಿತು.

ಕೂರ್ಗ ಬೈರೇಸ್ ವಿವಾದ ಸೇರಿದಂತೆ ಕೊಡಗಿನ ಮೂಲನಿವಾಸಿಗಳು ಕಳೆದ ಹಲವು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ದೀರ್ಘವಾಗಿ ಚರ್ಚಿಸಲಾಯಿತು. ಅಲ್ಲದೇ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಈ ಕುರಿತು ಪರಿಹಾರ ಕಂಡುಕೊಳ್ಳಲು ಹಂತ ಹಂತವಾದ ಹೋರಾಟ ರೂಪಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಕೊಡಗು ಮೂಲನಿವಾಸಿ ವಿವಿಧ ಸಮುದಾಯದ ಪ್ರತಿನಿಧಿಗಳು, ಜನಾಂಗಿಯ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,