Header Ads Widget

ಸರ್ಚ್ ಕೂರ್ಗ್ ಮೀಡಿಯ

ಗ್ರಾಮ ಮಟ್ಟದಲ್ಲಿ ಇನ್ಮುಂದೆ ಪಿಡಿಒ ಜನನ, ಮರಣ ನೋಂದಣಾಧಿಕಾರಿ

ಗ್ರಾಮ ಮಟ್ಟದಲ್ಲಿ ಇನ್ಮುಂದೆ ಪಿಡಿಒ ಜನನ, ಮರಣ ನೋಂದಣಾಧಿಕಾರಿ


ಬೆಂಗಳೂರು: ಪಿಡಿಒಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮ ಲೆಕ್ಕಿಗರನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಶೇ.100 ರಷ್ಟು ಜನನ, ಮರಣ ನೋಂದಣಿ ದಾಖಲಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಅನುಮೋದನೆ ಕೋರಲಾಗಿತ್ತು.

ಅದಕ್ಕೆ ಕೇಂದ್ರ ಸರ್ಕಾರ ತನ್ನ ಸಹಮತಿ ವ್ಯಕ್ತಪಡಿಸಿತ್ತು.ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯಲ್ಲಿ ಗ್ರಾಮೀಣ ಪ್ರದೇಶದ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮ ಪಂಚಾಯಿತಿಗಳು ಹೆಚ್ಚುವರಿಯಾಗಿ ಮಾಡಬೇಕು. ಒಂದು ವೇಳೆ ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಲೆಕ್ಕಾಧಿಕಾರಿಯ ಕಾರ್ಯ ವ್ಯಾಪ್ತಿಯ ಬಗ್ಗೆ ತಕರಾರು ಬಂದಲ್ಲಿ, ಗ್ರಾಮ ಪಂಚಾಯಿತಿಗಳು ತೀರ್ಮಾನ ತೆಗೆದು ಕೊಳ್ಳಬೇಕೆಂದು ಸೂಚಿಸಲಾಗಿದೆ. 

ಕಂದಾಯ ಇಲಾಖೆಯೂ ಈ ನಿಟ್ಟಿನಲ್ಲಿ ತನ್ನ ಸಹಮತಿ ನೀಡಿತ್ತು.ಇದೀಗ ಸರ್ಕಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮ ಲೆಕ್ಕಿಗರನ್ನು ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಲು ಆದೇಶಿಸಿದೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,