Header Ads Widget

Responsive Advertisement

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಜಿಮ್ ಉದ್ಘಾಟನೆ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಜಿಮ್ ಉದ್ಘಾಟನೆ 


ಮಡಿಕೇರಿ ಫೆ.11: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶುಕ್ರವಾರ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹಾಗೂ ಶುಶ್ರೂಷಕ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರುಗಳು ಹಾಗೂ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿ ವರ್ಗದವರುಗಳು ಬಳಸಲು ಸುಮಾರು 40 ಲಕ್ಷ ಮೌಲ್ಯದ ಅತ್ಯುನ್ನತ, ಉತ್ಕøಷ್ಟ ದರ್ಜೆಯ ಜಿಮ್ (ವ್ಯಾಯಮ ಉಪಕರಣಗಳು) ಶಾಲೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಸದರಿ ಜಿಮ್‍ನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಿ ಲೋಕಾರ್ಪಣೆ ಮಾಡಿದರು. 

ಸದರಿ ಉದ್ಘಾಟನ ಸಮಾರಂಭದಲ್ಲಿ ಶಾಸಕರು ಮಾತನಾಡಿ ಉದ್ಘಾಟಿಸಲಾಗಿರುವ ಜಿಮ್‍ನ್ನು ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ  ಎಲ್ಲರೂ ಪರಿಣಾಮಕಾರಿಯಾಗಿ ಬಳಸಿಕೊಂಡು ಆರೋಗ್ಯ ಕಾಪಡಿಕೊಳ್ಳಲು ಕರೆ ನೀಡಿದರು ಹಾಗೂ ಕಳೆದ 5 ವರ್ಷಗಳಿಂದಲೂ ಸ್ವತಃ ಯೋಗ ಮಾಡುತ್ತಿರುವುದಾಗಿ ಮತ್ತು ಪ್ರತಿದಿನ ಅರ್ದ ಗಂಟೆ ಜಿಮ್ ಮಾಡುತ್ತಿರುವುದಾಗಿ ತಿಳಿಸಿ ಹಾಜರಿದ್ದ ಎಲ್ಲರೂ ದಿನವಹಿ ಅಭ್ಯಾಸ ಮಾಡಲು ತಿಳಿಸಿದರು. ಪ್ರೇರಪಣೆ ಮಾತುಗಳನ್ನಾಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕೆ.ಬಿ.ಕಾರ್ಯಪ್ಪ,          ಮುಖ್ಯ ಆಡಳಿತಾಧಿಕಾರಿ ಡಾ.ನಂಜುಂಡೆಗೌಡ, ಪ್ರಾಂಶುಪಾಲರು/ ಜಿಲ್ಲಾ ಶಸ್ತ್ರ ಚಿಕಿತ್ಸಕರು ಡಾ.ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷಕರಾದ ಡಾ.ಎಸ್.ಮಂಜುನಾಥ, ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತು ವೈದ್ಯಕೀಯ ವಿದ್ಯಾರ್ಥಿಗಳು ಹಾಜರಿದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,