ಶ್ರೀ ವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾ ಶಿವರಾತ್ರಿ ವಿಶೇಷ ಪೂಜಾ ಕೈಂಕರ್ಯ
ನಗರದ ದಾಸವಾಳ ಬಡಾವಣೆಯಲ್ಲಿರುವ ಶ್ರೀ ವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾ ಶಿವರಾತ್ರಿ ವಿಶೇಷ ಪೂಜಾ ಕೈಂಕರ್ಯವು ಮಾ.1 ರಂದು ನಡೆಯಲಿದೆ.
ಅಂದು ಬೆಳಿಗ್ಗೆ 7 ಗಂಟೆಗೆ ಶಿವರಾತ್ರಿ ಪ್ರಯುಕ್ತ ಮಡಿವಾಳರ ಅಭಿವೃದ್ಧಿ ಸಂಘದ ಸಹಭಾಗಿತ್ವದಲ್ಲಿ ಮಹಾಗಣಪತಿ ಹೋಮ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ನಗರದ ಗಣಪತಿ ಬೀದಿಯಿಂದ ಬನ್ನಿಮಂಟಪ, ಮಹದೇವಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆ ಮಾರ್ಗವಾಗಿ ದೇವಾಲಯಕ್ಕೆ ವೀರಭದ್ರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ಜಾಮ ಪೂಜೆ ಜರುಗಲಿದೆ.
ಜಾಗರಣೆ ಪ್ರಯುಕ್ತ ರಾತ್ರಿ 8 ಗಂಟೆಗೆ ರಂಗಪೂಜೆ, 10 ಗಂಟೆಗೆ ಸಭಾ ಕಾರ್ಯಕ್ರಮದ ನಂತರ ಮರುದಿನ ಬೆಳಿಗ್ಗೆ 5 ಗಂಟೆಯ ವರೆಗೆ ನೃತ್ಯ ಸ್ಪರ್ಧೆ ಕಾರ್ಯಕ್ರಮಗಳು ನಡೆಯಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ವೀರಭದ್ರ ಮುನೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network