Header Ads Widget

ಸರ್ಚ್ ಕೂರ್ಗ್ ಮೀಡಿಯ

ಜೇನು ಕೃಷಿ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

ಜೇನು ಕೃಷಿ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ


ಮಡಿಕೇರಿ: ಭಾಗಮಂಡಲದಲ್ಲಿ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಮಟ್ಟದ ಜೇನು ಕೃಷಿ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. 

      ಜೇನು ಕೃಷಿಗೆ ಸಂಬಂಧಿಸಿದ ಮ್ಯೂಸಿಯಂ, ಮಧುವನ ಕೇಂದ್ರದಲ್ಲಿನ ಜೇನು ಸಾಕಾಣಿಕೆಯ ಪ್ರಾತ್ಯಕ್ಷಿಕೆಯನ್ನು ಜಿಲ್ಲಾಧಿಕಾರಿ ಅವರು ವೀಕ್ಷಿಸಿದರು. 

       ತರಬೇತಿ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ವಿದ್ಯಾರ್ಥಿಗಳು ಜೇನು ಕೃಷಿಯನ್ನು ಒಂದು ಉದ್ಯಮವಾಗಿ ಕೈಗೊಂಡು ಜಿಲ್ಲೆಯಲ್ಲಿ ಹೆಚ್ಚಿನ ಕೃಷಿಕರು ಜೇನು ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ತರಬೇತಿ ನೀಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 

       ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ ರೈತ ಉತ್ಪಾದಕರ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯವರು ಕೈಗೊಂಡಿರುವ ಕಾರ್ಯ ಚಟುವಟಿಕೆಗಳನ್ನು ವೀಕ್ಷಿಸಿದರು. 

       ಎಫ್.ಪಿ.ಆರ್‍ಒ ಬ್ರಾಂಡ್‍ನಲ್ಲಿ ಉತ್ಪಾದಿಸಿದ ಕಾಳು ಮೆಣಸು, ಏಲಕ್ಕಿ, ಜೇನು, ಕಾಫಿ ಪುಡಿ ತೆಂಗಿನ ಎಣ್ಣೆಯನ್ನು ವೀಕ್ಷಿಸಿದರು. ಈ ಉತ್ಪನ್ನಗಳನ್ನು ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲು ಮುಂದಾಗುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದರು. 

       ಬಳಿಕ ಜೇನು ಸಹಕಾರ ಸಂಘಕ್ಕೆ ಭೇಟಿ ನೀಡಿ ಜೇನು ಸಂಸ್ಕರಣಾ ಘಟಕವನ್ನು ವೀಕ್ಷಿಸಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಜೇನು ಕೃಷಿ ಪ್ರವರ್ತಕರಾದ ವಸಂತ, ಭಗಂಡೇಶ್ವರ ಸಹಕಾರ ಸಂಘದ ಅಧ್ಯಕ್ಷರಾದ ಕೋಡಿ ಪೊನ್ನಪ್ಪ, ಗ್ರಾ.ಪಂ. ಉಪಾಧ್ಯಕ್ಷರಾದ ಹೊಸೂರು ಸತೀಶ್ ಕುಮಾರ್, ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,