Header Ads Widget

ಸರ್ಚ್ ಕೂರ್ಗ್ ಮೀಡಿಯ

ಸ್ವ ಉದ್ಯೋಗದೊಂದಿಗೆ ಸ್ವಾವಲಂಬಿಗಳಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು; ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಳಸಿ

ಸ್ವ ಉದ್ಯೋಗದೊಂದಿಗೆ ಸ್ವಾವಲಂಬಿಗಳಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು;  ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಳಸಿ 


ಜೀವನದಲ್ಲಿ ಗುರಿ ಸಾಧಿಸುವ ಛಲದೊಂದಿಗೆ ಮಹಿಳೆಯರು ಸ್ವ ಉದ್ಯೋಗದೊಂದಿಗೆ ಸ್ವಾವಲಂಬಿಗಳಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಳಸಿ ಅಭಿಪ್ರಾಯಪಟ್ಟಿದ್ದಾರೆ.

ಗ್ರಾ.ಪಂ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ನಬಾರ್ಡ್) ಹಾಗೂ ಮಹಿಳೋದಯ ಮಹಿಳಾ ಒಕ್ಕೂಟ (ಒಡಿಪಿ)ಸಂಸ್ಥೆಯ ಸಹಯೋಗದಲ್ಲಿ ಗ್ರಾಮೀಣ ಮಟ್ಟದ ಜಾಗೃತಿ ಹಾಗೂ ಆರ್ಥಿಕ ಸೇರ್ಪಡೆ ತರಬೇತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳೆಯರಿಗಾಗಿ ಸರ್ಕಾರದ ಹಲವಾರು ಯೋಜನೆಗಳಿದ್ದು,ಇದರ ಪ್ರಯೋಜನ ಪಡೆದುಕೊಂಡು ಮಹಿಳಾ ಸಂಘಟನೆಯಲ್ಲಿ ಗುರ್ತಿಸಿಕೊಳ್ಳುವ ಮೂಲಕ ಯೋಜನೆಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಹೇಳಿದ ಅವರು ಓಡಿಪಿ ಮಹಿಳಾ ಸಂಘಟನೆ ಸಮಾಜಮುಖಿ ಸೇವೆ ಮಾಡುವುದರೊಂದಿಗೆ ಮಹಿಳೆಯರನ್ನು ಆರ್ಥಿಕವಾಗಿ ಸ್ವ ಉದ್ಯೋಗಿಗಳಾಗಿ ಮಡುವ ಮೂಲಕ ಮುಖ್ಯವಾಹಿನಿಗೆ ತರುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಮಿಕ ಇಲಾಖೆಯ ಅಧಿಕಾರಿ ಅನಿಲ್ ಬಗಟಿ ಮಾತನಾಡಿ ಕಾರ್ಮಿಕ ಶ್ರಮಜೀವಿಗಳಿಗೆ ಸರಕಾರ ಹಲವಾರು ಯೋಜನೆಗಳನ್ನು ನೀಡಿದ್ದು ಅಗತ್ಯ ದಾಖಲಾತಿಗಳೊಂದಿಗೆ ನೋಂದಾವಣೆ ಮಾಡಿಕೊಳ್ಳುವುದರ ಮೂಲಕ ಕಾರ್ಮಿಕರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಈ ಸಂದರ್ಭ ಓಡಿಪಿ ಮಹಿಳೋದಯ ಮಹಿಳಾ ಒಕ್ಕೂಟದ ಸಂಯೋಜಕಿ ಜಾಯ್ಸ್ ಮೆನೇಜಸ್, ಕಾರ್ಯಕರ್ತರಾದ ವಿಜಯನಾರಾಯಣ, ಧನುಕುಮಾರ್, ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮೋಹನ್,

ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಪ್ರೇಮಾ, ರೇಖಾ ಸೇರಿದಂತೆ ಅವರೆಗುಂದ, ಕರಡಿಗೋಡು, ಗುಹ್ಯ, ಸಿದ್ದಾಪುರ, ಮಾಲ್ದಾರೆ ಸೇರಿದಂತೆ ಇತರ ಗ್ರಾಮಗಳಿಂದ ನೂರಾರು ಮಹಿಳೆಯರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,