Header Ads Widget

ಸರ್ಚ್ ಕೂರ್ಗ್ ಮೀಡಿಯ

ಸಿಂಥೆಟಿಕ್ ಬ್ಯಾಡ್ಮಿಂಟನ್ ಆಟದ ಅಂಕಣ ಉದ್ಘಾಟನೆ

ಸಿಂಥೆಟಿಕ್ ಬ್ಯಾಡ್ಮಿಂಟನ್ ಆಟದ ಅಂಕಣ ಉದ್ಘಾಟನೆ


ಮಡಿಕೇರಿ ಫೆ.24: ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ 6.30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಿಂಥೆಟಿಕ್ ಬ್ಯಾಡ್ಮಿಂಟನ್ ಆಟದ ಅಂಕಣವನ್ನು ಸಂಸದರಾದ ಪ್ರತಾಪ್ ಸಿಂಹ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಗುರುವಾರ ಉದ್ಘಾಟಿಸಿದರು. 

ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ 2 ಸಿಂಥೆಟಿಕ್ ಆಟದ ಅಂಕಣವನ್ನು ನಿರ್ಮಿಸಲಾಗಿದ್ದು, ಶಟಲ್ ಬ್ಯಾಡ್ಮಿಂಟನ್ ಆಡುವ ಮೂಲಕ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾಧಿಕಾರಿ ಅವರು  ಗಮನ ಸೆಳೆದರು. 


ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಇತರರು ಇದ್ದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸುಸಜ್ಜಿತ ಸಿಂಥೆಟಿಕ್ ಬ್ಯಾಡ್ಮಿಂಟನ್ ಆಟದ ಅಂಕಣವನ್ನು ನಿರ್ಮಿಸಲಾಗಿದ್ದು, ಸಾರ್ವಜನಿಕರು ಬಳಸಿಕೊಳ್ಳುವಂತೆ ತಿಳಿಸಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,