Header Ads Widget

ಸರ್ಚ್ ಕೂರ್ಗ್ ಮೀಡಿಯ

ಏ.1 ರಂದು ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮ: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ

ಏ.1 ರಂದು ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮ: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ


ಮಡಿಕೇರಿ ಮಾ.29: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್, 1 ರಂದು ಬೆಳಗ್ಗೆ 11 ಗಂಟೆಗೆ 5 ನೇ ಆವೃತ್ತಿಯ ‘ಪರೀಕ್ಷಾ ಪೇ ಚರ್ಚಾ’ ಆನ್‍ಲೈನ್/ವರ್ಚುವಲ್ ಮೂಲಕ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು, ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದು, ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಕೇಂದ್ರೀಯ ವಿದ್ಯಾಲಯದ ಪದ್ಮಪ್ರಿಯಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದು, ಆ ನಿಟ್ಟಿನಲ್ಲಿ ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು. 

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವು ಬಹು ನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರೀಕ್ಷೆಯ ಒತ್ತಡ ಮತ್ತು ಸಂಬಂಧಿಸಿದಂತೆ ನೇರ ಪ್ರಸಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಲಿದ್ದಾರೆ ಎಂದು ಡಾ.ಬಿ.ಸತೀಶ ಅವರು ವಿವರಿಸಿದರು.  

ದೇಶದಾದ್ಯಂತ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮ ಪ್ರಸಾರವಾಗಲಿದ್ದು, ದೂರದರ್ಶನ, ರೇಡಿಯೋ, ಟಿ.ವಿ ಚಾನಲ್‍ಗಳು, ಯುಟ್ಯೂಬ್ ಚಾನಲ್‍ಗಳು ಸೇರಿದಂತೆ ಡಿಜಿಟಲ್ ಚಾನಲ್‍ಗಳಲ್ಲಿ ಪ್ರಸಾರವಾಗಲಿದ್ದು, ಈ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾಗಿದೆ ಎಂದರು.  

ಮಕ್ಕಳಲ್ಲಿ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆ ಸಂಬಂಧಿಸಿದಂತೆ ಹುರಿದುಂಬಿಸುವಲ್ಲಿ ಮತ್ತು ಪ್ರೋತ್ಸಾಹಿಸುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 

ಆನ್‍ಲೈನ್ ಮೂಲಕ ನಡೆಯುವ ಸಂವಾದ ಕಾರ್ಯಕ್ರಮ ವೀಕ್ಷಿಸಲು ನಗರದ ಕೇಂದ್ರೀಯ ವಿದ್ಯಾಲಯ ಮತ್ತು ನವೋದಯ ವಿದ್ಯಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ದೂರದರ್ಶನ, ಯುಟ್ಯೂಬ್‍ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.  

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೇದಮೂರ್ತಿ, ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಅರ್ಜುನ್ ಸಿಂಗ್, ಜವಹಾರ್ ನವೋದಯ ಶಾಲೆಯ ಪ್ರಾಂಶುಪಾಲರಾದ ಪಂಕಜಾಕ್ಷನ್ ಇದ್ದರು.

ಬಳಿಕ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಸುಗಮವಾಗಿ ಆರಂಭವಾಗಿದೆ ಎಂದು ತಿಳಿಸಿದರು. 

ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ತುತ್ತಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಮಲೆನಾಡು ಭಾಗದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆದಿದೆ. ಹಾಗೆಯೇ ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳ ಜೊತೆಗೆ ಶೀಘ್ರ ಸಭೆ ನಡೆಸಲಾಗುವುದು ಎಂದರು. 

     ಇನ್ನಷ್ಟು ಮಾಹಿತಿ:-ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏಪ್ರಿಲ್ 1 ರಂದು, 5 ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾದಲ್ಲಿ ವಿಶ್ವದಾದ್ಯಂತ ಇರುವ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೆÇೀಷಕರೊಂದಿಗೆ ಸಂವಾದ ನಡೆಸಲಿದ್ದಾರೆ. 

       ಪರೀಕ್ಷಾ ಪೇ ಚರ್ಚಾ ಎಂಬುದು ಬಹು ನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾಗಿದ್ದು, ಪ್ರಧಾನಮಂತ್ರಿಯವರು ಪರೀಕ್ಷೆಯ ಒತ್ತಡ ಮತ್ತು ಸಂಬಂಧಿತ ಪ್ರಶ್ನೆಗಳಿಗೆ ನೇರ ಪ್ರಸಾರ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅನನ್ಯವಾಗಿ ತಮ್ಮ ವಿಶಿಷ್ಟ ಶೈಲಿಯಲ್ಲಿ ತೊಡಗಿಸಿಕೊಂಡು ಉತ್ತರಿಸುತ್ತಾರೆ. 

      ಪರೀಕ್ಷಾ ಪೇ ಚರ್ಚಾ, ಎಂಬ ಪದವನ್ನು ಸಾರ್ವಜನಿಕ ಆಂದೋಲನ ಎಂದು ವಿವರಿಸುತ್ತಾ, ದೇಶವು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಹೊರಬರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಪರೀಕ್ಷೆಗಳು ಆಫ್‍ಲೈನ್ ಮೋಡ್‍ಗೆ, ಹಿಂತಿರುಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಪಿಪಿಸಿ ಯು ಪ್ರಾಮುಖ್ಯತೆ ಹೊಂದಿದೆ. 

     ಪಿಪಿಸಿ ಯಂತಹ ಉಪಕ್ರಮಗಳ ಪ್ರಾಮುಖ್ಯತೆಯನ್ನು ಅಡಿಗೆರೆ ಹಾಕುವುದರ ಮೂಲಕ 21 ನೇ ಶತಮಾನದ ಜ್ಞಾನ ಆಧಾರಿತ ಆರ್ಥಿಕತೆಯನ್ನು ನಿರ್ಮಿಸಲು ಪಿಪಿಸಿಯನ್ನು ಔಪಚಾರಿಕ ಸಂಸ್ಥೆಯಾಗಿ ಪ್ರಧಾನ ಮಂತ್ರಿಯವರು ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಲು ಬಳಸಿಕೊಳ್ಳುತ್ತಿದ್ದಾರೆ.

     ಈ ಈವೆಂಟ್' ಅನ್ನು ರಾಜ್ಯ ರಾಜ್ಯಪಾಲರ ಉಪಸ್ಥಿತಿಯಲ್ಲಿ ರಾಜಭವನಕ್ಕೆ ಭೇಟಿ ನೀಡಿ ವೀಕ್ಷಿಸಲು ದೇಶಾದ್ಯಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ' ಎಂದು ತಿಳಿಸಿದರು. ದೇಶಾದ್ಯಂತ ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳ, ಶಿಕ್ಷಕರ ಮತ್ತು ಪೆÇೀಷಕರ ಭಾಗವಹಿಸುವಿಕೆಯನ್ನು ಪೆÇ್ರೀತ್ಸಾಹಿಸುತ್ತದೆ.  

ಈ ಕಾರ್ಯಕ್ರಮವನ್ನು ಸಾಮೂಹಿಕ ಚಳುವಳಿಯಾಗಿಸಿ ವಿದ್ಯಾರ್ಥಿಗಳಿಗೆ ಒತ್ತಡ-ಮುಕ್ತ ಪರೀಕ್ಷೆಗಳನ್ನು ಖಾತ್ರಿಪಡಿಸುವುದಕ್ಕಾಗಿ ಮಾಧ್ಯಮಗಳು ಬೆಂಬಲವನ್ನೂ ನೀಡುವಂತೆ ಕರೆ ನೀಡಿದರು.

    ಪರೀಕ್ಷಾ ಪೇ ಚರ್ಚಾವು ಒಂದು ದೊಡ್ಡ ಆಂದೋಲನವಾಗಿದ್ದು, ಎಕ್ಸಾಮ್ ವಾರಿಯರ್ಸ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಯುವಕರಿಗೆ ಒತ್ತಡ ರಹಿತ ವಾತಾವರಣ ಸೃಷ್ಟಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಕರೆ ನೀಡಿದ್ದಾರೆ.   

     ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿದ್ಯಾರ್ಥಿಗಳನ್ನು, ಪೆÇೀಷಕರನ್ನು, ಶಿಕ್ಷಕರನ್ನು ಮತ್ತು ಸಮಾಜವನ್ನು ಒಟ್ಟು ಗೂಡಿಸಲು ಮತ್ತು ವಿಶಿಷ್ಟ ಪ್ರತ್ಯೇಕತೆಯ ಪರಿಸರವನ್ನು ಬೆಳೆಸುವುದರೊಂದಿಗೆ ಪ್ರತಿಯೊಂದು ಮಗುವನ್ನು ವ್ಯಕ್ತಿತ್ವವನ್ನು ಆಚರಿಸಲು, ಪೆÇ್ರೀತ್ಸಾಹಿಸಲು, ಮತ್ತು ಸಂಪೂರ್ಣವಾಗಿ ವ್ಯಕ್ತಪಡಿಸಲು ಅವಕಾಶ ನೀಡಲಾಗುತ್ತದೆ.

     5 ನೇ ಆವೃತ್ತಿಯು ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಸಂವಾದಾತ್ಮಕ ರೂಪದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು. ಭಾರತ ಮತ್ತು ವಿದೇಶದ ಕೋಟಿಗಟ್ಟಲೆ ವಿದ್ಯಾರ್ಥಿಗಳು ಶಿಕ್ಷಕರು ಮತ್ತು ಪೋಷಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

     ಪ್ರಧಾನಮಂತ್ರಿಗೆ ಪ್ರಶ್ನೆಗಳನ್ನು ಕೇಳಲು, ವಿದ್ಯಾರ್ಥಿಗಳ, ಶಿಕ್ಷಕರ ಮತ್ತು ಪೆÇೀಷಕರ ಆನ್‍ಲೈನ್ ಸೃಜನಶೀಲ ಬರವಣಿಗೆ ಆಧಾರದ ಮೇಲೆ, ಕಿರುಪಟ್ಟಿ ಮಾಡಲಾಗಿದೆ. ಸ್ಪರ್ಧೆಯನ್ನು 2021 ರ ಡಿಸೆಂಬರ್, 28 ರಿಂದ 2022ರ ಫೆಬ್ರವರಿ, 03 ರವರೆಗೆ  my gov  ವೇದಿಕೆಯಲ್ಲಿ ಆಯೋಜಿಸಲಾಗಿತ್ತು. 15.7 ಲಕ್ಷಕ್ಕೂ ಅಧಿಕ ಮೊತ್ತದ ಸ್ಪರ್ಧಾರ್ಥಿಗಳು ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಭಾಗವಹಿಸಿರುವುದರ ಬಗ್ಗೆ ಸಚಿವರು ತೃಪ್ತಿ ವ್ಯಕ್ತಪಡಿಸಿದರು.my gov  ನಲ್ಲಿ ಸ್ಪರ್ಧೆಗಳ ಮೂಲಕ ಆಯ್ಕೆಯಾಗಿ ಭಾಗವಹಿಸುವವರಿಗೆ ಎ ಶ್ಲಾಘನೆಯ ಪ್ರಮಾಣಪತ್ರ ಮತ್ತು ವಿಶೇಷ ಪರೀಕ್ಷಾ ಪೇ ಚರ್ಚಾ ಕಿಟ್‍ನಲ್ಲಿ ಪ್ರಧಾನಿ ಮೋದಿ ಅವರು ಬರೆದಿರುವ ಎಕ್ಷಾಮ್ ವಾರಿಯರ್ಸ್ ಪುಸ್ತಕವನ್ನು ನೀಡಲಾಗುವುದು.

     ಕಳೆದ ನಾಲ್ಕು ವರ್ಷಗಳಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಶಿಕ್ಷಣ ಸಚಿವಾಲಯ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಮೊದಲ ಪಿಪಿಸಿ ಯ ಮೂರು ಅವೃತ್ತಿಗಳನ್ನು ನವದೆಹಲಿಯಲ್ಲಿ ಟೌನ್‍ಹಾಲ್ ನಲ್ಲಿ ಸಂವಾದಾತ್ಮಕ ಸ್ವರೂಪದಲ್ಲಿ ನಡೆಸಲಾಯಿತು. ಪ್ರಧಾನ ಮಂತ್ರಿಗಳ ಸಂವಾದ ಕಾರ್ಯಕ್ರಮದ 1 ನೇ ಆವೃತ್ತಿ ‘ಪರೀಕ್ಷಾ ಪೇ ಚರ್ಚಾ 1.0’ ಅನ್ನು  16 ನೇ ಫೆಬ್ರವರಿ 2018 ರಂದು ನಡೆಸಲಾಯಿತು. ಈ ಸಂವಾದದ 2ನೇ ಆವೃತ್ತಿ ಶಾಲಾ ಕಾಲೇಜು, ವಿದ್ಯಾರ್ಥಿಗಳೊಂದಿಗೆ ‘ಪರೀಕ್ಷಾ ಪೇ ಚರ್ಚಾ 2.0’ ಕಾರ್ಯಕ್ರಮ 29ನೇ ಜನವರಿ 2019 ರಂದು ನಡೆಸಲಾಯಿತು ಮತ್ತು 3ನೇ ಆವೃತ್ತಿಯು 20ನೇ ಜನವರಿ 2020 ರಂದು ನಡೆಯಿತು.

    ಕೋವಿಡ್-19 ಸಾಂಕ್ರಾಮಿಕದಿಂದಾಗಿ ನಾಲ್ಕನೇ ಆವೃತ್ತಿಯನ್ನು 7ನೇ ಏಪ್ರಿಲ್ 2021 ರಂದು ಆನ್‍ಲೈನ್‍ನಲ್ಲಿ ನಡೆಸಲಾಯಿತು. 

      ಈ ಈವೆಂಟ್ ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದ್ದು (ಡಿಡಿ ನ್ಯಾಷನಲ್. ಡಿಡಿ ನ್ಯೂಸ್, ಡಿಡಿ ಇಂಡಿಯಾ), ರೇಡಿಯೋ ಚಾನೆಲ್‍ಗಳು, ಟಿವಿ ಚಾನೆಲ್‍ಗಳು, ಎಡುಮಿನೋಫ್ ಇಂಡಿಯಾದ ಯೂಟ್ಯೂಬ್ ಚಾನೆಲ್‍ಗಳು, ನರೇಂದ್ರಮೋದಿ, ಪಿಮೊಯಿಂಡಿಯಾ, ಪಿಬಿಂಡಿಯಾ, ದೂರದರ್ಶನ ನ್ಯಾಷನಲ್, ಮೈಗೌಇಂಡಿಯಾ, ಡಿಡಿನ್ಯೂಸ್, ರಾಜ್ಯಸಭಾ ಟಿವಿ, ಸ್ವಯಂ ಪ್ರಭಾದಲ್ಲಿಯು ಪ್ರಸಾರವಾಗಲಿದೆ.