Header Ads Widget

Responsive Advertisement

ಯುಗಾದಿ ಹಬ್ಬದ ಪ್ರಯುಕ್ತ ಏ.2 ರಂದು ಜೋಡುಪಾಲದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

ಯುಗಾದಿ ಹಬ್ಬದ ಪ್ರಯುಕ್ತ ಏ.2 ರಂದು ಜೋಡುಪಾಲದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ


ಯುಗಾದಿ ಹಬ್ಬದ ಪ್ರಯುಕ್ತ ಕೊಡಗು ಜಿಲ್ಲಾ ಅಮೇಚೂರು ಅಸೋಸಿಯೇಷನ್ ಮತ್ತು ಜೋಡುಪಾಲ ಗೆಳೆಯರ ಬಳಗ ವತಿಯಿಂದ ‘ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ’ ಏ.2 ರಂದು ನಡೆಯಲಿದೆ ಎಂದು ಬಳಗದ ಸದಸ್ಯ ಧನಂಜಯ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೋಡುಪಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಮದೆಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಿಗೆ ವಿವಿಧ ಕ್ರೀಡಾಕೂಟ ಆಯೋಜಿಸಲಾಗಿದೆ. ಮಹಿಳೆ ಮತ್ತು ಪುರುಷರಿಗೆ ಹಗ್ಗಜಗ್ಗಾಟ, ಮಕ್ಕಳಿಗೆ ಓಟ ಸ್ಪರ್ಧೆ ಸೇರಿದಂತೆ ವಿವಿಧ ಕ್ರೀಡೆಗಳು ನಡೆಯಲಿದೆ. ಸಂಜೆ 5 ಗಂಟೆಗೆ ನಾಕೌಟ್ ಮಾದರಿಯಲ್ಲಿ ನಡೆಯುವ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಕ್ಕೆ(ಮ್ಯಾಟ್ ಕಬಡ್ಡಿ) ಭಾರತ ಕಬಡ್ಡಿ ತಂಡದ ಮಾಜಿ ನಾಯಕ, ಅರ್ಜುನ ಪ್ರಶಸ್ತಿ ಪುರಸ್ಕೃತ ಬಿ.ಸಿ.ರಮೇಶ್ ಚಾಲನೆ ನೀಡಲಿದ್ದು, ಜಿಲ್ಲೆಯ ಗಣ್ಯರು ಪಾಲ್ಗೊಳ್ಳಲಿದ್ದಾರೆ ಮಾಹಿತಿ ನೀಡಿದರು.

ಮೈದಾನ ಶುಲ್ಕ 1000 ನಿಗಧಿ ಪಡಿಸಲಾಗಿದ್ದು, ಮೊದಲು ನೊಂದಾಯಿಸಿದ 20 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಪ್ರಥಮ ಸ್ಥಾನ ಪಡೆದ ತಂಡಕ್ಕೆ ರೂ.20,222, ದ್ವಿತೀಯ 15,555, ತೃತೀಯ 7,777, ಚತುರ್ಥ 5,555 ನಗದು ಮತ್ತು ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುವುದು. ತಂಡದ ಹೆಸರು ನೊಂದಾಯಿಸಲು 8277132143, 9731009841, 8762479821 ದೂರವಾಣಿ ಸಂಖ್ಯೆ ಸಂಪರ್ಕಿಸುವಂತೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜೋಡುಪಾಲ ಗೆಳೆಯರ ಬಳಗದ ಅಧ್ಯಕ್ಷ ಮತ್ತು ಮಾಜಿ ಸೈನಿಕ ಪ್ರಮೋದ್ ಚೆರಿಯಮನೆ, ಅಸೋಸಿಯೇಷನ್ ಕಾರ್ಯದರ್ಶಿ ಕಪೀಲ್, ಬಳಗದ ಸದಸ್ಯರಾದ ಸಂಜಯ್, ದಿನೇಶ್, ಗಣೇಶ್ ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,