Header Ads Widget

Responsive Advertisement

ರೈತ ಬೆಳೆ ಸಮೀಕ್ಷೆ ಆಪ್ 2021-22” ಮೂಲಕ 2021-22ನೇ ಸಾಲಿನಲ್ಲಿ ಬೇಸಿಗೆ ಬೆಳೆ ಸಮೀಕ್ಷೆ

ರೈತ ಬೆಳೆ ಸಮೀಕ್ಷೆ ಆಪ್ 2021-22” ಮೂಲಕ 2021-22ನೇ ಸಾಲಿನಲ್ಲಿ ಬೇಸಿಗೆ ಬೆಳೆ ಸಮೀಕ್ಷೆ


ಮಡಿಕೇರಿ ಮಾ.19: ಪ್ರಸ್ತಕ ಸಾಲಿನ ಬೇಸಿಗೆ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಇಲಾಖೆಯ ಅಭಿವೃದ್ಧಿ ಪಡಿಸಿರುವ ರೈತ ಬೆಳೆ ಸಮೀಕ್ಷೆ ಆಪ್ 2021-22” ಮೂಲಕ ಸ್ವಯಂ ರೈತರೇ ತಾವು ಬೆಳೆದಿರುವ ಬೆಳೆಯನ್ನು ನಮೂದಿಸಬಹುದಾಗಿದೆ.

ಬೇಸಿಗೆ ಬೆಳೆ ಸಮೀಕ್ಷೆಯ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನಿನ ಸರ್ವೆ ನಂ, ಹಿಸ್ಸಾ ನಂಬರ್‍ವಾರು ತಾವು ಬೆಳೆದ ಕೃಷಿ ಬೆಳೆ, ಬಹುವಾರ್ಷಿಕ ತೋಟಗಾರಿಕೆ, ಅರಣ್ಯ ಇತರೆ ಬೆಳೆಗಳನ್ನು ಪ್ಲೇಸ್ಟೋರ್‍ನಲ್ಲಿ ಲಭ್ಯವಿರುವ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮಾಡುವುದರ ಮೂಲಕ ನೋಂದಾಯಿಸಬಹುದಾಗಿದೆ.   

2021-22ನೇ ಸಾಲಿನ ಬೇಸಿಗೆ ಬೆಳೆ ಸಮೀಕ್ಷೆ ಕಾರ್ಯ ಕೊಡಗು ಜಿಲ್ಲೆಯಲ್ಲಿ ಆಯ್ದ ಗ್ರಾಮಗಳಲ್ಲಿ ಆರಂಭವಾಗಿದೆ. ಸರ್ಕಾರದ ಆದೇಶದ ಅನುಸಾರ ಈ ಬಾರಿಯು ಬೇಸಿಗೆ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ  ಕಲ್ಪಿಸಲಾಗಿದೆ.  ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಫಾರ್ಮರ್ಸ್ ಕ್ರಾಪ್ ಸರ್ವೇ ಆ್ಯಪ್-2021-22 ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. (https://play.google.com/store/apps/details...)

ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಬೆಳೆ ಸಮೀಕ್ಷೆಗೆ ಆಯ್ಕೆಯಾಗಿರುವ ಗ್ರಾಮಗಳ ವಿವರ ಇಂತಿದೆ: ಮಡಿಕೇರಿ ತಾಲ್ಲೂಕಿನ ಅರೆಕಾಡು, ಕೆ-ಬಾಡಗ, ಸೋಮವಾರಪೇಟೆ ತಾಲ್ಲೂಕಿನ ಹಾರೆಹೊಸೂರು, ಹಿರಿಕರ, ಕರ್ಕನಳ್ಳಿ, ಹಂಪಾಪುರ ಹಾಗೂ ವಿರಾಜಪೇಟೆ ತಾಲ್ಲೂಕಿನ ದೇವಣಗೇರಿ, ಚನ್ನಯ್ಯಕೋಟೆ, ಮೇಕೂರು ಹೊಸ್ಕೇರಿ ಮತ್ತು ಬಿಟ್ಟಂಗಾಲ.  

ಬೆಳೆ ಸಮೀಕ್ಷೆ ಮಾಹಿತಿಯನ್ನು ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು. ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು. ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ. ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು. ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ. ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಬಳಸಲಾಗುತ್ತಿದೆ.  

ಆದ್ದರಿಂದ ಬೇಸಿಗೆ ಬೆಳೆ ಸಮೀಕ್ಷೆಯನ್ನು ಆಯ್ದ ಗ್ರಾಮಗಳಲ್ಲಿ ಮೊಬೈಲ್ ಆಪ್ ಮುಖಾಂತರ ಕೈಗೊಳ್ಳಲು ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರ ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರಾದ ಶಬನಾ ಎಂ.ಷೇಕ್ ಅವರು ತಿಳಿಸಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,