"ಶಕ್ತಿ /ಇಂಧನ ಸಂರಕ್ಷಣೆ" ಕುರಿತು ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ
ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ ಅವರು ನವೀಕರಿಸಲಾಗದ ನೈಸರ್ಗಿಕ ಸಂಪನ್ಮೂಲಗಳ ವ್ಯರ್ಥತೆಯನ್ನು ಕಡಿಮೆ ಮಾಡಿ ನಾವು ಭವಿಷ್ಯಕ್ಕಾಗಿ ಭೂ ಸಂಪನ್ಮೂಲ ಉಳಿಸಬೇಕಿದೆ ಎಂದರು.
ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಭವಿಷ್ಯಕ್ಕಾಗಿ ಶಕ್ತಿ ಮೂಲಗಳ ಸಂರಕ್ಷಣೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
"ಶಕ್ತಿ ಮತ್ತು ಇಂಧನ ಸಂರಕ್ಷಣೆ" ಕುರಿತು ಮಾಹಿತಿ ನೀಡಿದ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್‍ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಅವರು ಪ್ರಸ್ತುತ ಪೀಳಿಗೆ ಮತ್ತು ಮುಂದಿನ ಪೀಳಿಗೆಗೆ ಶಕ್ತಿ ಸಂರಕ್ಷಣೆಯ ಮಹತ್ವವನ್ನು ತಿಳಿಸಲು ಇಂತಹ ಜಾಗೃತಿ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ. ಮುಂದಿನ ಪೀಳಿಗೆಯವರ ಬದುಕು ಹಸನಾಗಲು ನಾವೆಲ್ಲರೂ ಶಕ್ತಿ ಮತ್ತು ಇಂಧನ ಮೂಲಗಳನ್ನು ಸಂರಕ್ಷಣೆಯೊಂದಿಗೆ ಪರ್ಯಾಯ ಇಂಧನ ಮೂಲಗಳ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.
ಮರು ನವೀಕರಣ ಮಾಡಲಾಗದ ನೈಸರ್ಗಿಕ ಸಂಪನ್ಮೂಲಗಳ ಮಹತ್ವನ್ನು ಇಲ್ಲಿ ಅರಿಯಬೇಕಿದೆ. ಶಕ್ತಿಯ ಸಂರಕ್ಷಣೆ ಒಂದು ಪ್ರಮುಖ ಹೆಜ್ಜೆಯಾಗಿದ್ದು, ಮುಂದಿನ ಪೀಳಿಗೆಗಳು ನಾಳೆ ಉಜ್ವಲವಾಗಿ ಬದುಕುವಂತೆ ನೋಡಿಕೊಳ್ಳಬೇಕು ಎಂದರು.
ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಶಿಕ್ಷಣಾಧಿಕಾರಿ ಕೆ.ಕಾಂತರಾಜು, ಮಡಿಕೇರಿ ಬಿ.ಆರ್.ಸಿ. ಪಿ.ಕೆ.ನಳಿನಿ, ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ.ಎಸ್.ಸುರೇಶ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಮ್ಮ, ಪ್ರೌಢಶಾಲಾ ವಿಜ್ಞಾನ ಶಿಕ್ಷಕಿ ಜನೆಟ್ ಇದ್ದರು.
ಸ್ಪರ್ಧೆಯ ವಿಜೇತರು: ಪ್ರಬಂಧ ಸ್ಪರ್ಧೆಯಲ್ಲಿ ಕ್ರಮವಾಗಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ. ವಿದ್ಯಾರ್ಥಿನಿ ಸಂಜನಾ(ಪ್ರಥಮ), ಮಡಿಕೇರಿ ಸಂತ ಮೈಕಲ್ಲರ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿಯಾನ್ ಕೆ.ಜಾನ್ಸನ್ (ದ್ವಿತೀಯ), ಪೆÇನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಎ.ವಿ.ಸಾನಿಯ ವಿದ್ಯಾರ್ಥಿನಿ (ತೃತೀಯ) ಮೊದಲ ಮೂರು ಸ್ಥಾನ ಪಡೆದರು.
ಮೊದಲ ಮೂರು ಸ್ಥಾನ ಪಡೆದ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳು ಕ್ರಮವಾಗಿ ರೂ.2 ಸಾವಿರ, ರೂ.1,500 ಹಾಗೂ ರೂ.750 ನಗದು ಬಹುಮಾನ ಗಳಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪರಿಸರ ಸಂರಕ್ಷಣೆ ಕುರಿತ ಪುಸ್ತಕಗಳನ್ನು ನೀಡಲಾಯಿತು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network