ಸಿದ್ಧಾಪುರ ನಗರದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ
ಈ ಸಂಧರ್ಭದಲ್ಲಿ ಮಾತನಾಡಿದ ಸಿದ್ಧಾಪುರ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರವೀಣ್ ಸಿದ್ಧಾಪುರ ರವರು ನಾಲ್ಕು ಕಡೆ ಕಾಂಗ್ರೆಸ್ಸನ್ನು ಸೋಲಿಸುವ ಮೂಲಕ ಸಂಪೂರ್ಣ ಕಾಂಗ್ರೆಸ್ ಮುಕ್ತ ಭಾರತಕ್ಕೆ ಅಡಿಪಾಯ ಹಾಕಿ ದ್ವಿತೀಯ ಭಾರಿಗೆ ಬಿಜೆಪಿಯನ್ನು ಆಯ್ಕೆ ಮಾಡಿದ ಮತದಾರರಿಗೆ ಧನ್ಯವಾದಗಳು ಅರ್ಪಿಸುವುದಾಗಿ ತಿಳಿಸಿದರು, ಮುಂದಿನ ವರ್ಷಗಳಲ್ಲಿ ಕರ್ನಾಟಕದಲ್ಲಿ ಕೂಡಾ ಚುನಾವಣೆ ನಡೆಯಲಿದ್ದು ಉತ್ತರಪ್ರದೇಶದ ರೀತಿಯಲ್ಲಿಯೇ ಪುನಃ ಕರ್ನಾಟಕದಲ್ಲಿ ಕೂಡಾ ಬಿಜೆಪಿ ಸರಕಾರವನ್ನು ತರಲು ಹಿಂದೂಗಳು ಶ್ರಮಿಸಬೇಕೆಂದು ಕರೆ ಕೊಟ್ಟರು.
ಯುವ ಮುಖಂಡರಾದ ಸುರೇಶ್ ನೆಲ್ಲಿಕ್ಕಲ್ ರವರು ಮಾತನಾಡಿ ಮತ್ತೊಮ್ಮೆ ಮೋದಿಯವರ ಯೋಗಿಯವರ ಜನಪರ ಆಡಳಿತ ಮೆಚ್ಚಿ ವಿಪಕ್ಷಗಳ ಅಪಪ್ರಚಾರಗಳ ನಡುವೆಯೂ ಅಭೂತಪೂರ್ವ ಗೆಲುವು ಸಾಧಿಸಲು ಕಾರಣೀಕರ್ತರಾದ ಕಾರ್ಯಕರ್ತರಿಗೆ ಅಭಿನಂದನೆಗಳು ಸಲ್ಲಿಸಿದರು.
ಪಂಚರಾಜ್ಯ ಚುನಾವಣೆಯ ಬಿಜೆಪಿ ಗೆಲುವು ಮುಂಬರುವ ಲೋಕಸಭಾ ಚುನಾವಣೆಯ ಗೆಲುವು ಎಂದು ವಿಶ್ಲೇಷಿಸಿದ ಅವರು 2024 ರ ಚುನಾವಣೆಯಲ್ಲಿ ಕೂಡಾ ಮೋದಿಯವರು ಗೆಲ್ಲುವ ನಿಟ್ಟಿನಲ್ಲಿ ನಾವು ಇಂದೇ ಕಾರ್ಯಪ್ರವೃತರಾಗಬೇಕೆಂದು ಕಿವಿಮಾತು ಹೇಳಿದರು.
ಈ ಸಂಧರ್ಭದಲ್ಲಿ ಸಿದ್ಧಾಪುರ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ-ಸಹಪ್ರಮುಖರು, ಹಿರಿಯ ಮುಖಂಡರುಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಂಚಾಯಿತಿ ಸದಸ್ಯರುಗಳು, ಹಿಂದೂ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network