Header Ads Widget

Responsive Advertisement

ಕ್ಲೋಸ್‍ಬರ್ನ್ ಸಹಿಪ್ರಾ ಶಾಲೆಯ ನೂತನ ಕೊಠಡಿ ಉದ್ಘಾಟನೆ

ಕ್ಲೋಸ್‍ಬರ್ನ್ ಸಹಿಪ್ರಾ ಶಾಲೆಯ ನೂತನ ಕೊಠಡಿ ಉದ್ಘಾಟನೆ


ಮಡಿಕೇರಿ ಮಾ.14: ಕಡಗದಾಳು ಪಂಚಾಯಿತಿ ವ್ಯಾಪ್ತಿಯ ಕ್ಲೋಸ್‍ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 21 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ನೂತನ ಕೊಠಡಿಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕರಾದ ಅಪ್ಪಚ್ಚು ರಂಜನ್ ಅವರು ಸರ್ಕಾರ ಮನೆಮನೆಗೆ ಎಲ್ಲಾ ಸವಲತ್ತುಗಳನ್ನು ತಲುಪಿಸುವ ಕಾರ್ಯಕ್ಕೆ ಮುಂದಾಗಿದೆ. ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿಯೂ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಲು ಆಸಕ್ತಿ ತೋರಬೇಕು ಎಂದರು. 

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ, ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಿದರೆ ಮಾತ್ರ ಉತ್ತಮ ಶಿಕ್ಷಣ ಸಿಗುತ್ತದೆ ಎಂಬ ಮನಸ್ಥಿತಿಯಿಂದ ಪೋಷಕರು ಹೊರಬರಬೇಕು. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂದರು.  

ಕಡಗದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಟಿ.ಜಯಣ್ಣ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಹಳೆಯ ವೈಭವ ಕಂಡುಬರಬೇಕು. ಕ್ಲೋಸ್‍ಬರ್ನ್ ಶಾಲೆ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಗ್ರಾಮ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚು ಮಾಡಲು ಪಂಚಾಯಿತಿಯಿಂದ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಶಾಲೆಗೆ ಸಭಾಂಗಣ ನಿರ್ಮಿಸಿಕೊಡುವಂತೆ ಶಾಸಕ ಅಪ್ಪಚ್ಚು ರಂಜನ್ ಅವರಿಗೆ ಇದೇ ಸಂದರ್ಭ ಮನವಿ ಪತ್ರ ಸಲ್ಲಿಸಲಾಯಿತು. ಬಳಿಕ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು. ಶಾಲೆ ಮುಖ್ಯ ಶಿಕ್ಷಕಿ ಸುಜಾತಾ ಪ್ರಾಸ್ತಾವಿಕ ಮಾತನಾಡಿದರು.

ಎಸ್‍ಡಿಎಂಸಿ ಅಧ್ಯಕ್ಷೆ ಶಾಹಿದಾ, ಗ್ರಾಪಂ ಉಪಾಧ್ಯಕ್ಷೆ ಪ್ರಭಾವತಿ, ಸದಸ್ಯೆ ಪುಷ್ಪಾವತಿ ರೈ, ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ನಳಿನಿ, ಶಿಕ್ಷಣ ಸಂಯೋಜಕರಾದ ಮಾರುತಿ, ಹರೀಶ್, ಸಿಆರ್‍ಪಿ ವೀಣಾ, ಶಿಕ್ಷಕರಾದ ರಾಧಮ್ಮ, ಉಷಾ, ಜೆಸ್ಸಿ ಮತ್ತಿತರರು ಇದ್ದರು. ಹಳೇ ವಿದ್ಯಾರ್ಥಿ ಸಂಘದ ಕತ್ತಲೆಕಾಡು ಕಿಶೋರ್ ರೈ ಅವರು ಕಾರ್ಯಕ್ರಮ ನಿರೂಪಿಸಿದರು.

ಶೈಕ್ಷಣಿಕ ಅಭಿವೃದ್ಧಿ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮ ಜಾರಿಗೆ ತಂದಿದೆ. ಕೊಡಗು ಜಿಲ್ಲೆಗೆ ಹೊಸದಾಗಿ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಬಜೆಟ್‍ನಲ್ಲಿ ಅನುದಾನ ಮೀಸಲಿಟ್ಟಿದೆ. ಶೈಕ್ಷಣಿಕವಾಗಿ ಕೊಡಗಿನ ಜನರಿಗೆ ಇದರಿಂದ ಬಹಳ ಅನುಕೂಲ ಆಗುತ್ತದೆ ಎಂದು ಶಾಸಕರು ಹೇಳಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,