Header Ads Widget

ಸರ್ಚ್ ಕೂರ್ಗ್ ಮೀಡಿಯ

ಡ್ರೋನ್ ಮೂಲಕ ಜಮೀನುಗಳ ಸರ್ವೆ ಕಾರ್ಯಕ್ಕೆ ಮುಂದಾದ ಸರ್ಕಾರ

ಡ್ರೋನ್ ಮೂಲಕ ಜಮೀನುಗಳ ಸರ್ವೆ ಕಾರ್ಯಕ್ಕೆ ಮುಂದಾದ ಸರ್ಕಾರ


ಜಮೀನುಗಳ ಸರ್ವೆ ಕಾರ್ಯಗಳಿಗೆ ಅರ್ಜಿ ಸಲ್ಲಿಸಿದರೆ ಸಾಕಷ್ಟು ಸಾರ್ವಜನಿಕರಿಗೆ ವಿಳಂಬವಾಗುತ್ತಿರುವುದನ್ನು ಪರಿಗಣಿಸಿ ಮತ್ತಷ್ಟು ಚುರುಕು ನೀಡುವ ಸಲುವಾಗಿ, ರಾಜ್ಯ ಸರ್ಕಾರದ ಕಂದಾಯ ಇಲಾಖೆ ಇದೀಗ ಡ್ರೋನ್ ಸರ್ವೇ ನಡೆಸಲು ಮುಂದಾಗಿದೆ.

ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಈ ಕುರಿತು ಮಾಹಿತಿ ನೀಡಿದ್ದು, 100 ವರ್ಷಗಳಿಂದ ಆಸ್ತಿ ಸರ್ವೇ ಕಾರ್ಯವಾಗಿಲ್ಲ. ಸರ್ವೇ ಕಾರ್ಯವನ್ನು ಮಾಡೋದಕ್ಕೆ ಡ್ರೋನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ತ್ವರಿತವಾಗಿ ಡ್ರೋನ್ ಮೂಲಕ ಸರ್ವೇ ಕಾರ್ಯ ನಡೆಸಲಾಗುತ್ತದೆ ಎಂಬುದಾಗಿ ತಿಳಿಸಿದರು.

ಡ್ರೋನ್ ಮೂಲಕ ರೈತರ ಜಮೀನುಗಳನ್ನು ಸರ್ವೇ ಮಾಡುವಂತಹ ಕಾರ್ಯವು ಮೊದಲಿಗೆ ರಾಮನಗರ, ತುಮಕೂರು, ಹಾಸನ, ಬೆಂಗಳೂರು ನಗರ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಡೆಸಲಾಗಿದೆ. ಈ ಕಾರ್ಯವನ್ನು ಭಾರತೀಯ ಸರ್ವೇಕ್ಷಣಾ ಸಂಸ್ಥೆ ಮೂಲಕ ನಡೆಸಲಾಗಿದೆ ಎಂದರು.

ರಾಜ್ಯದ ಇನ್ನುಳಿದಂತ 26 ಜಿಲ್ಲೆಗಳಲ್ಲಿ ಡ್ರೋನ್ ಸರ್ವೇ ಕಾರ್ಯವನ್ನು ಆರಂಭಿಸಲಾಗುತ್ತಿದೆ. 1.40 ಲಕ್ಷ ಚದರ ಕಿಲೋಮೀಟರ್ ಡ್ರೋನ್ ಸರ್ವೇ ಕಾರ್ಯವನ್ನು ಪ್ರಾರಂಭಿಸಲಾಗುತ್ತಿದ್ದು, ಇದಕ್ಕಾಗಿ 287 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಆಸ್ತಿಯ ಸ್ಪಷ್ಟ ಮಾಲೀಕತ್ವವನ್ನು ಸ್ಥಾಪಿಸುವ ಗುರಿಯನ್ನು ಹೊಂದಲು ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಭೂಭಾಗಗಳನ್ನು ಮ್ಯಾಪಿಂಗ್ ಮಾಡುವುದರ ಮೂಲಕ ಮತ್ತು ಅರ್ಹ ಕುಟುಂಬಗಳಿಗೆ ಕಾನೂನು ಮಾಲೀಕತ್ವದ ಕಾರ್ಡ್‌ಗಳನ್ನು ನೀಡುವ ಮೂಲಕ ಹಕ್ಕುಗಳ ದಾಖಲೆಯನ್ನು ಒದಗಿಸಲು ಕೇಂದ್ರ ಸರ್ಕಾರ ಸ್ವಾಮಿತ್ವ್ ಯೋಜನೆಯನ್ನು ಏಪ್ರೀಲ್ 2020ರಲ್ಲಿ ಪ್ರಾರಂಭಿಸಿದೆ. 

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,