Header Ads Widget

ಸರ್ಚ್ ಕೂರ್ಗ್ ಮೀಡಿಯ

ಮದೆನಾಡು ಗ್ರಾ.ಪಂ.ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೆ.ಜಿ.ಬೋಪಯ್ಯ ಚಾಲನೆ

ಮದೆನಾಡು ಗ್ರಾ.ಪಂ.ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೆ.ಜಿ.ಬೋಪಯ್ಯ ಚಾಲನೆ 


ಮಡಿಕೇರಿ ಮಾ.05: ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಸುಮಾರು 2.50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಶನಿವಾರ ಚಾಲನೆ ನೀಡಿದರು.   

     ಬಳಿಕ ಮಾತನಾಡಿದ ಶಾಸಕರು ಸರ್ಕಾರ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡಿದೆ. ಆ ನಿಟ್ಟಿನಲ್ಲಿ ಕೃಷಿಕರು, ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.   

      ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಸೇತುವೆ, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಹೀಗೆ ಹತ್ತು ಹಲವು ಮೂಲ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ. ಗ್ರಾಮೀಣ ಪ್ರದೇಶ ಅಭಿವೃದ್ಧಿ ಆದಲ್ಲಿ ರಾಷ್ಟ್ರದ ಅಭಿವೃದ್ಧಿ ಎಂಬುದನ್ನು ಮರೆಯುವಂತಿಲ್ಲ ಎಂದರು. 

    ಕಾಮಗಾರಿಗಳ ವಿವರ ಇಂತಿದೆ: ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂದಾಜು 2 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಿಜಿಟಲ್ ಗ್ರಂಥಾಲಯವನ್ನು ಶಾಸಕರು ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಅಧ್ಯಕ್ಷರಾದ          ಕೆ.ಜಿ.ಬೋಪಯ್ಯ ಅವರು ಇಂದು  ಉದ್ಘಾಟಿಸಿದರು.

     ಬಳಿಕ ಮದೆನಾಡು ವ್ಯಾಪ್ತಿಯಲ್ಲಿ 9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಾಲೋನಿಗೆ ಸೇರಿದ ರಸ್ತೆಯ ಗುದ್ದಲಿ ಪೂಜೆ  ಹಾಗೂ 30 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಮದೆ ಸಾಲಪು ಗ್ರಾಮದ ರಸ್ತೆ ಮತ್ತು ಸೇತುವೆ ಉದ್ಘಾಟಿಸಿದರು.  

       3 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಡ ಕುಟುಂಬಕ್ಕೆ ಸೇರಿದ ರಸ್ತೆ ಮತ್ತು ಮದೆಮಾದುರಪ್ಪ ದೇವಸ್ಥಾನ ರಸ್ತೆಯ 4 ಲಕ್ಷ ವೆಚ್ಚದ ಕಾಮಗಾರಿಯ ಉದ್ಘಾಟನೆ. 

       ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಹುಲಿಮನೆ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆಯನ್ನು ಶಾಸಕರು ಉದ್ಘಾಟಿಸಿದರು. 

      ಮದೆನಾಡು ಪಂಚಾಯಿತಿಗೆ ಸಂಬಂಧಿಸಿದಂತೆ ಅಂದಾಜು 2.50 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮತ್ತು ಗುದ್ದಲಿ ಪೂಜೆಯನ್ನು ಶಾಸಕರಾದ ಕೆ.ಜಿ.ಬೊಪ್ಪಯ್ಯನವರು ನೆರವೇರಿಸಿದರು. 

       ಮಡಿಕೇರಿ ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಬೆಪ್ಪುರನ ಮೇದಪ್ಪ, ಮದೆನಾಡು ಪಂಚಾಯಿತಿಯ ಅಧ್ಯಕ್ಷರಾದ ಚೇರಿಯಮನೆ ಚಂದ್ರಾವತಿ, ಉಪಾಧ್ಯಕ್ಷರಾದ ಪಿ.ಎ.ಚಂದ್ರಾವತಿ, ಪ್ರಮುಖರಾದ ಧನಂಜಯ, ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಜಗದೀಶ್, ಶಕ್ತಿ ಕೇಂದ್ರದ ಪ್ರಮುಖರಾದ ಬೆಳ್ಯನ ರವಿ, ಕಾರ್ಯಕರ್ತರಾದ ತನು, ಸುರೇಶ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ನಂಜುಂಡಸ್ವಾಮಿ ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,