Header Ads Widget

Responsive Advertisement

ಎರಡು ದಿನಗಳ ಪಂಚಾಯತ್ ರಾಜ್ ಇಲಾಖಾ ಕ್ರೀಡಾಕೂಟಕ್ಕೆ ಚಾಲನೆ

ಎರಡು ದಿನಗಳ ಪಂಚಾಯತ್ ರಾಜ್ ಇಲಾಖಾ ಕ್ರೀಡಾಕೂಟಕ್ಕೆ ಚಾಲನೆ


ಮಡಿಕೇರಿ 26: ಸದಾ ಒತ್ತಡದಿಂದ ಕಾರ್ಯನಿರ್ವಹಿಸುವ ಪಂಚಾಯತ್ ರಾಜ್ ಇಲಾಖಾ ನೌಕರರಿಗೆ ಮಾನಸಿಕ ಮತ್ತು ದೈಹಿಕ ಒತ್ತಡ ಕಡಿಮೆ ಮಾಡುವಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅಭಿಪ್ರಾಯ ಪಟ್ಟರು. 

ಕೊಡಗು ಜಿಲ್ಲಾ ಪಂಚಾಯತ್, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಪಂಚಾಯತ್ ರಾಜ್ ನೌಕರರ ಸಂಘ, ಪಂಚಾಯತ್ ರಾಜ್ ಇಂಜಿನಿಯರಿಂಗ್ ನೌಕರರ ಸಂಘ, ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. , ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 

ಹಿಂದಿನ ವರ್ಷದಂತೆ ಈ ಬಾರಿಯೂ ಸಹ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕ್ರೀಡೆಯಿಂದ ನೌಕರರಲ್ಲಿ ಮಾನಸಿಕ ವಿಶ್ರಾಂತಿ‌ ಮತ್ತು ಒಗ್ಗಟ್ಟು ಬೆಳೆಯುತ್ತದೆ. ಆಟದಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಅತ್ಯಂತ ಪ್ರಮುಖವಾದದ್ದು ಎಂದು ಅವರು ಹೇಳಿದರು. 

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಿ ಪಿ. ಅವರು ಮಾತನಾಡಿ, ಏಪ್ರಿಲ್ ೨೪ ರಂದು ನಡೆಯುವ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಿದ್ದು, ನೌಕರರು ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು ಎಂದರು. 

ಸದಾ ಜನರ ಸೇವೆಗಾಗಿ ಶ್ರಮ ಪಡುವ ನೌಕರರು ಮತ್ತು ಅಧಿಕಾರಿ ವೃಂದ ಇಂತಹ ಕ್ರೀಡಾಕೂಟಗಳಲ್ಲಿ ಭಾಗಿಯಾದರೆ ಒತ್ತಡವನ್ನು ನಿವಾರಿಸಿ ಚೈತನ್ಯದಿಂದ ಕಾರ್ಯನಿರ್ವಹಿಸಬಹುದು ಎಂದರು. 

ಜಿ.ಪಂ.ಸಿ.ಇ.ಒ ಅವರ ಮಾರ್ಗದರ್ಶನದಲ್ಲಿ ಈ ಬಾರಿಯೂ ಕ್ರೀಡಾಕೂಟ ಆಯೋಜಿಸಿದ್ದು, ನೌಕರರು ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸುವಂತೆ ತಿಳಿಸಿದರು. 

ಇದಕ್ಕೂ ಮೊದಲು ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮದೆ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ನಂಜುಂಡಸ್ವಾಮಿ ಅವರು ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸಿದರು. 

ಬಳಿಕ ಅಥ್ಲೆಟಿಕ್ಸ್, ವಾಲಿಬಾಲ್, ಥ್ರೋ ಬಾಲ್, ಹಗ್ಗಜಗ್ಗಾಟ ಸೇರಿದಂತೆ ಇತರೆ ಕ್ರೀಡಾಕೂಟಗಳು ನಡೆದವು. 

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಶೇಖರ್, ಜಯಣ್ಣ, ಅಪ್ಪಣ್ಣ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರು ಇತರರು ಇದ್ದರು.