Header Ads Widget

Responsive Advertisement

ಕೊಡಗು ಜಿಲ್ಲೆಯಲ್ಲಿ ಸುಸೂತ್ರವಾಗಿ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ

ಕೊಡಗು ಜಿಲ್ಲೆಯಲ್ಲಿ ಸುಸೂತ್ರವಾಗಿ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ


ಮಡಿಕೇರಿ ಮಾ.28: ಕೊಡಗು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯು ಸುಸೂತ್ರವಾಗಿ ಆರಂಭಗೊಂಡಿದೆ. ಕೊಡಗು ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆ ಸುಗಮವಾಗಿ ನಡೆಯಿತು. 

ಜಿಲ್ಲೆಯಲ್ಲಿ ಒಟ್ಟು 6,680 ವಿದ್ಯಾರ್ಥಿಗಳಲ್ಲಿ 6,447 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 233 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. 6 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೇದಮೂರ್ತಿ ಅವರು ಮಾಹಿತಿ ನೀಡಿದ್ದಾರೆ. 

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಗರದ ಜೂನಿಯರ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಮಹೇಶ್, ಪ್ರಾಂಶುಪಾಲರು, ಇತರರು ಇದ್ದರು.