ಮಡಿಕೇರಿ ನಗರಸಭೆ ವ್ಯಾಪ್ತಿಗೆ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ದಾಖಲೆಗಳ ಹಸ್ತಾಂತರ
ಮಡಿಕೇರಿ ನಗರಸಭೆ ವ್ಯಾಪ್ತಿಗೆ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ೨ನೇ ಮೊಣ್ಣಂಗೇರಿ ಗ್ರಾಮದಲ್ಲಿ ಗುರ್ತಿಸಲಾಗಿರುವ (ಸರ್ವೇ ನಂ೨೦/೧) ಜಾಗದ ದಾಖಲೆಗಳನ್ನು ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಮತ್ತು ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರಿಗೆ ಸೋಮವಾರ ಹಸ್ತಾಂತರಿಸಲಾಯಿತು.
ಜಿಲ್ಲಾಧಿಕಾರಿ ಅವರ ಆದೇಶದಂತೆ ಭೂದಾಖಲೆಗಳ ಇಲಾಖೆಯ ಕುಚೇಲ ಅವರು ನಗರಸಭೆ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪರಿಸರ ಎಂಜಿನಿಯರ್ ಸೌಮ್ಯ ಇತರರು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network