ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಪಿಂಚಣಿ ಸಪ್ತಾಹ
ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸುವ ಸಲುವಾಗಿ ಮಾರ್ಚ್ 13 ರ ವರೆಗೆ ಪಿಂಚಣಿ ಸಪ್ತಾಹ ಕಾರ್ಯಕ್ರಮ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆಗಳ ಮಾಹಿತಿ ನೀಡುವ ಬಗ್ಗೆ ಸಾಂಪ್ರದಾಯಿಕ ವಾರವನ್ನಾಗಿ ಆಚರಣೆ ಮಾಡಲಾಗುತ್ತಿದೆ.
ಗೃಹ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮಧ್ಯಾಹ್ನದ ಬಿಸಿಯೂಟ ತಯಾರಕರು, ಬೀದಿ ಬದಿ ವ್ಯಾಪಾರಸ್ಥರು, ರಿಕ್ಷಾ ಚಾಲಕರು, ಟೈಲರ್‍ಗಳು, ಹಮಾಲಿಗಳು, ಕ್ಷೌರಿಕರು, ಅಗಸರು, ಕಟ್ಟಡ ಕಾರ್ಮಿಕರು, ಮಹಾತ್ಮಾ ಗಾಂಧೀ ನರೇಗಾ ಕಾರ್ಮಿಕರು, ಕೃಷಿ ಕಾರ್ಮಿಕರು, ತೋಟ ಕಾರ್ಮಿಕರು ಸೇರಿದಂತೆ ಇದೇ ರೀತಿಯ ಇತರೆ ಉದ್ಯೋಗಗಳ ಕೆಲಸಗಾರರು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದಾಗಿದೆ.
ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುಭವಿಯ 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3 ಸಾವಿರ ಖಚಿತ ಕನಿಷ್ಠ ಮಾಸಿಕ ಪಿಂಚಣಿ ಪಡೆಯಬಹುದಾಗಿದೆ.
ನೋಂದಣಿಗೆ ಕಾರ್ಮಿಕರು ಮತ್ತು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂದ 40 ವರ್ಷದೊಳಗಿದ್ದು, ಮಾಸಿಕ ಆದಾಯ 15 ಸಾವಿರಕ್ಕಿಂತ ಕಡಿಮೆ ಇರಬೇಕು. ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಕೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐಎಫ್‍ಎಸ್‍ಸಿ ಕೋಡ್ ವಿವರಗಳೊಂದಿಗೆ (ಬ್ಯಾಂಕ್ ಪಾಸ್ ಪುಸ್ತಕ) ತಮ್ಮ ನಾಮನಿರ್ದೇಶಿತರ ವಿವರಗಳು ಮತ್ತು ಮೊಬೈಲ್ ಹ್ಯಾಂಡ್ ಸೆಟ್‍ನೊಂದಿಗೆ “ಕಾಮನ್ ಸರ್ವೀಸ್ ಸೆಂಟರ್’ಗಳಿಗೆ ಭೇಟಿ ಕೊಡುವುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 11, ಜಿಲ್ಲಾಡಳಿತ ಭವನ, ಮಡಿಕೇರಿ. ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಇಲ್ಲಿ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿ¯ ಬಗಟಿ ಅವರು ತಿಳಿಸಿದ್ದಾರೆ.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network