Header Ads Widget

ಸರ್ಚ್ ಕೂರ್ಗ್ ಮೀಡಿಯ

ಕೃಷಿ ಅರಣ್ಯ ಅಭಿಯಾನ; ಜನಜಾಗೃತಿ ಬೀದಿ ನಾಟಕಕ್ಕೆ ಚಾಲನೆ

ಕೃಷಿ ಅರಣ್ಯ ಅಭಿಯಾನ; ಜನಜಾಗೃತಿ ಬೀದಿ ನಾಟಕಕ್ಕೆ ಚಾಲನೆ


ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಸಾಮಾಜಿಕ ಅರಣ್ಯ ವಲಯ ವತಿಯಿಂದ ಕೃಷಿ ಅರಣ್ಯ ಅಭಿಯಾನ ಕುರಿತು ರೈತರಲ್ಲಿ ಜನಜಾಗೃತಿ ಮೂಡಿಸುವ ಬೀದಿನಾಟಕ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ದೊರೆಯಿತು. 

  ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ ಅವರು ಬೀದಿನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

  ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಈ. ರಾಜು, ಚಂದ್ರಪ್ಪ, ಶಿವಕುಮಾರ್, ಗೌರಮ್ಮ, ಪಾಪಣ್ಣ ತಂಡದವರು ಕೃಷಿ ಅರಣ್ಯ ಅಭಿಯಾನ ರೈತರಲ್ಲಿ ಜನಜಾಗೃತಿ ಕುರಿತು ಬೀದಿನಾಟಕ ಪ್ರದರ್ಶಿಸಿದರು. ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಬೀದಿನಾಟಕ ನಡೆಯಲಿದೆ. ವಲಯ ಅರಣ್ಯಾಧಿಕಾರಿ ಮಯೂರ್, ಕಾರ್ಲೆಕರ್, ಉಪ ವಲಯ ಅರಣ್ಯ ಅಧಿಕಾರಿ ದರ್ಶಿನಿ  ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,