Header Ads Widget

ಸರ್ಚ್ ಕೂರ್ಗ್ ಮೀಡಿಯ

ಕೊಡ್ಲಿಪೇಟೆ ಪದವಿಪೂರ್ವ ಕಾಲೇಜಿನಲ್ಲಿ ರೋವರ್ ಘಟಕ ಆರಂಭ

ಕೊಡ್ಲಿಪೇಟೆ ಪದವಿಪೂರ್ವ ಕಾಲೇಜಿನಲ್ಲಿ ರೋವರ್ ಘಟಕ ಆರಂಭ


ಮಡಿಕೇರಿ ಮಾ.28: ಸೋಮವಾರಪೇಟೆ ಸ್ಥಳೀಯ ಸಂಸ್ಥೆಯಡಿ ಬರುವ  ಕೊಡ್ಲಿಪೇಟೆ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ರೋವರ್ ಲೀಡರ್ ರಂಗಸ್ವಾಮಿ ಇವರ ನೇತೃತ್ವದಲ್ಲಿ ಹೊಸದಾಗಿ ರೋವರ್ ಘಟಕವನ್ನು ಪ್ರಾರಂಭಿಸಲಾಯಿತು.

 ರೋವರ್ ಘಟಕದ ಉದ್ಘಾಟನೆಯನ್ನು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತರಾದ  ಕೆ.ಟಿ.ಬೇಬಿ ಮ್ಯಾಥ್ಯೂ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

 ಸಭೆಯ ಅಧ್ಯಕ್ಷತೆಯನ್ನು ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಅಡ್ವೊಕೇಟ್ ಚಂದ್ರಮೌಳಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಂಸ್ಥೆಯ ಸ್ಥಾನಿಕ ಆಯುಕ್ತರಾದ ಎಚ್.ಆರ್.ಮುತ್ತಪ್ಪ, ತರಬೇತಿ ಆಯುಕ್ತರಾದ ಎನ್.ಎಲ್.ಸುರೇಶ್ ಕುಮಾರ್, ಸೋಮವಾರಪೇಟೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ ಅವರು ಪಾಲ್ಗೊಂಡಿದ್ದರು. ಅಲ್ಲದೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರುಗಳು, ಸಿಬ್ಬಂದಿ ವರ್ಗದವರು ಮತ್ತು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.