Header Ads Widget

Responsive Advertisement

ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರು, ಸಂಸದರಿಂದ ಚಾಲನೆ

ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರು, ಸಂಸದರಿಂದ ಚಾಲನೆ 


ಮಡಿಕೇರಿ ಮಾ.19: ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಕರ್ನಾಟಕ ರಾಜ್ಯ ಪಶ್ವಿಮ ಘಟ್ಟ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ ಅವರು ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಚಾಲನೆ ನೀಡಿದರು. 

ಸುಮಾರು 2.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಭಾಗಮಂಡಲ ಗೌಡ ಸಮಾಜ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. 43 ಲಕ್ಷ ರೂ. ವೆಚ್ಚದಲ್ಲಿ ಅಯ್ಯಂಗೇರಿ ಗ್ರಾ.ಪಂ. ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. 

ತಲಕಾವೇರಿಯಲ್ಲಿ ನಾಲ್ಕು ಅಂಗಡಿ ಮಳಿಗೆ ಉದ್ಘಾಟನೆ, ಹಾಗೆಯೇ ಹೊಸ ಅಂಗಡಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಣ್ಣು ಪರೀಕ್ಷಾ ಕೇಂದ್ರವನ್ನು ಶಾಸಕರು, ಸಂಸದರು ಉದ್ಘಾಟಿಸಿದರು. 

ಬಳಿಕ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ರೈತರ ಶ್ರೇಯೋಭಿವೃದ್ಧಿಗೆ ಸರ್ಕಾರ ಹತ್ತು ಹಲವು ಕಾರ್ಯಕ್ರಮ ರೂಪಿಸಿದೆ. ಅವುಗಳನ್ನು ಬಳಸಿಕೊಂಡು ಕೃಷಿಕರು, ಆರ್ಥಿಕವಾಗಿ ಸಬಲರಾಗುವತ್ತ ಮುಂದಾಗಬೇಕು ಎಂದು ಅವರು ಹೇಳಿದರು. 

ಸ್ಥಳೀಯವಾಗಿ ದೊರೆಯುವ ಕೃಷಿ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಸಲಹೆ ಮಾಡಿದರು. 

ಸಂಸದರಾದ ಪ್ರತಾಪ್ ಸಿಂಹ ಅವರು ಮಾತನಾಡಿ ಕಳೆದ ಎರಡು ವರ್ಷದಿಂದ ಕೊರೊನಾ ವೈರಸ್‍ನಿಂದಾಗಿ ಎಲ್ಲಾ ಜನರು ಸಂಕಷ್ಟ ಅನುಭವಿಸಿದ್ದು, ಅಭಿವೃದ್ಧಿಯ ವೇಗ ಕಡಿಮೆಯಾಗಿತ್ತು, ಸದ್ಯ ಕೊರೊನಾ ಕಡಿಮೆಯಾಗಿದ್ದು, ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಹೇಳಿದರು. 

14, 15 ನೇ ಹಣಕಾಸು ಯೋಜನೆಯಡಿ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಸಂಸದರು ಹೇಳಿದರು. 

ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಮಾತನಾಡಿ ಕೃಷಿಕರು ಸಾವಯವ ಕೃಷಿ ಮಾಡಿ ಉತ್ತಮ ಫಸಲು ಪಡೆಯುವಂತಾಗಬೇಕು. ಇದರಿಂದ ರೈತರು ಹಾಗೂ ಗ್ರಾಹಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಪ್ರತಿಪಾದಿಸಿದರು. 

ಕಳೆದ 36 ವರ್ಷಗಳಿಂದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಅಂಚಿನಲ್ಲಿರುವ ಹೊಸಗದ್ದೆ ಲಲಿತಾ ಭಾಸ್ಕರ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. 

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಹೊಸೂರು ಸತೀಶ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ಬೆಪ್ಪುರನ ಮೇದಪ್ಪ, ಪಳಂಗಪ್ಪ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಪಮಿತ, ಅಯ್ಯಂಗೇರಿ ಗ್ರಾ.ಪಂ. ಅಧ್ಯಕ್ಷರಾದ ರಂಜಿತ್ ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,