ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಭಾ ಭವನ ಹಾಗೂ ಸರ್ಕಾರದ ಅನುಧಾನದಿಂದ ಬಂದಂತಹ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ
ದಿನಾಂಕ: 27-03-2022 ನೇ ಭಾನುವಾರ ದಿವಸ ಪೂರ್ವಾಹ್ನ 11.00 ಗಂಟೆಗೆ ಕುಂಜಿಲ ಕಕ್ಕಬ್ಬೆಯಲ್ಲಿರುವ ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಉದ್ಘಾಟನಾ ಸಮಾರಂಭವು ನಡೆಯಲಿದೆ. ಸರ್ಕಾರದ ಅನುಧಾನದಿಂದ ಬಂದಂತಹ ವಿವಿಧ ಕಾಮಗಾರಿಗಲಾದ ಇಂಟರ್ ಲಾಕ್ ಅಂಗಳವನ್ನು ಸಂಸದರಾದ ಪ್ರತಾಪ್ ಸಿಂಹ, ಕಾಂಕ್ರಿಟ್ ರಸ್ತೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ತಡೆಗೋಡೆ ಮತ್ತು ಕಾಂಕ್ರಿಟ್ ರಸ್ತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ಜಮೀನುಗಳ ಸಂರಕ್ಷಣೆ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಭಾ ಭವನವನ್ನು ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಹಾಗೂ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಉಪಾಧ್ಯಕ್ಷರಾದ ಕೇಟೋಳಿರ ಹರೀಶ್ ಪೂವಯ್ಯ ಉದ್ಘಾಟಿಸಲಿದ್ದಾರೆ.
ಈ ಸರಳ ಸಮಾರಂಭಕ್ಕೆ ಅಧ್ಯಕ್ಷರು, ಉಪಾದ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ಸರ್ವರಿಗೂ ಸ್ವಾಗತವನ್ನು ಕೋರಿದ್ದಾರೆ.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network