ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆ
ನಗರದ ಬಾಲಭವನದಲ್ಲಿ ಸೋಮವಾರ ನಡೆದ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಾಕೃತಿಕ ವಿಕೋಪ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ 40-45 ವರ್ಷ ಮೇಲ್ಪಟ್ಟವರಿಗೆ ಮೂಳೆ ಸಂಬಂಧಿಸಿದ ತೊಂದರೆಗಳು ಉಂಟಾಗುತ್ತಿದ್ದು, ಆ ದಿಸೆಯಲ್ಲಿ ಮೂಳೆ ಸಾಂದ್ರತೆ ತಪಾಸಣಾ ಶಿಬಿರವನ್ನು ಆಯೋಜಿಸುವಂತಾಗಬೇಕು. ಹಾಗೆಯೇ ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಗೆ ಮತ್ತಷ್ಟು ಯುವ ಜನರು ಹೆಸರು ನೋಂದಾಯಿಸಿ ಸಂಸ್ಥೆ ಬೆಳವಣಿಗೆಗೆ ಹಾಗೂ ಸಮಾಜದ ಅಭಿವೃದ್ಧಿಗೆ ಕೈಜೋಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದರು.
ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಮಾತನಾಡಿ ಕಳೆದ ಎರಡು ಮೂರು ವರ್ಷಗಳಿಂದ ರೆಡ್‍ಕ್ರಾಸ್ ಸಂಸ್ಥೆಯಲ್ಲಿ ಕ್ರೀಯಾಶೀಲ ಚಟುವಟಿಕೆ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಹೀಗೆ ಹಲವು ಇಲಾಖೆಗಳ ಜೊತೆಗೂಡಿ ರಕ್ತದಾನ ಶಿಬಿರ, ಕೊರೊನಾ ಸಂದರ್ಭದಲ್ಲಿ ಆಹಾರ ಕಿಟ್ ವಿತರಣೆ, ಮದ್ಯಪಾನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಅಭಿಯಾನ, ಪರಿಸರ ಹಾಗೂ ಯೋಗ ದಿನಾಚರಣೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಅವರು ತಿಳಿಸಿದರು.
ಲಾಕ್‍ಡೌನ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ರೆಡ್‍ಕ್ರಾಸ್ ಸಂಸ್ಥೆ ಶ್ರಮಿಸಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ರೆಡ್‍ಕ್ರಾಸ್ ಭವನ ನಿರ್ಮಾಣವಾಗಿದ್ದು, 60 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಎಂದು ರವೀಂದ್ರ ರೈ ಅವರು ಮಾಹಿತಿ ನೀಡಿದರು.
ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ ಅವರು 2020-21 ನೇ ಸಾಲಿನ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆದರು. ರೆಡ್‍ಕ್ರಾಸ್ ಸಂಸ್ಥೆಯಲ್ಲಿ ಸ್ವಯಂ ಸೇವಕರಾಗಿ ಸುಮಾರು 20 ವರ್ಷಗಳಿಂದ ಕರ್ತವ್ಯ ನಿರ್ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.
ರೆಡ್‍ಕ್ರಾಸ್ ಸಂಸ್ಥೆಯಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಮನವಿ ಮಾಡಿದರು.
ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷರಾದ ಜೋಸೆಫ್ ಶ್ಯಾಮ್ ಅವರು ಮಾತನಾಡಿ ರೆಡ್‍ಕ್ರಾಸ್ ಸಂಸ್ಥೆ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ಕೋರಿದರು.
ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷರಾದ ಎಚ್.ಟಿ.ಅನಿಲ್ ಅವರು ಮಾತನಾಡಿ ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್ ಸಂದರ್ಭದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಅವರು ಸ್ಮರಿಸಿದರು.
ಕೋವಿಡ್-19 ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದ ಮುರಳೀಧರ ಹಾಗೂ ವಿಕ್ರಮ್ ಶೆಟ್ಟಿ ಜಾದುಗಾರ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ರೆಡ್‍ಕ್ರಾಸ್ ಸಂಸ್ಥೆಯ ಆಡಳಿತಾಧಿಕಾರಿ ಪೊನ್ನಮ್ಮ ಅವರು ಆಯವ್ಯಯ ಮಂಡಿಸಿದರು. ಎಚ್.ಟಿ.ಅನಿಲ್ ನಿರೂಪಿಸಿದರು, ಪ್ರಧಾನ ಕಾರ್ಯದರ್ಶಿ ಮುರಳೀಧರ ಅವರು ಸ್ವಾಗತಿಸಿ, ವಂದಿಸಿದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network