Header Ads Widget

Responsive Advertisement

ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ ಬಿ.ಎನ್.ಪ್ರತ್ಯು ನೇಮಕ

ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ ಬಿ.ಎನ್.ಪ್ರತ್ಯು ನೇಮಕ


ಪೊನ್ನಂಪೇಟೆ, ಮಾ.08: ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ (ಓಬಿಸಿ) ವಿಭಾಗದ ನೂತನ ಸಾರಥಿಯಾಗಿ ಜಿ. ಪಂ. ಮಾಜಿ ಸದಸ್ಯ ಮತ್ತು ಹಿರಿಯ ಕಾಂಗ್ರೆಸ್ ಮುಂದಾಳು ಬಾನಂಡ ಎನ್. ಪ್ರತ್ಯು ಅವರು ನೇಮಕಗೊಂಡಿದ್ದಾರೆ.

ಡಿಸಿಸಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರ ಶಿಫಾರಸಿನ ಮೇರೆಗೆ ಹಾಗು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ, ಮಾಜಿ ಶಾಸಕ ಎಂ.ಡಿ. ಲಕ್ಷ್ಮಿ ನಾರಾಯಣ (ಅಣ್ಣಯ್ಯ) ಅವರು ಪ್ರತ್ಯು ಅವರನ್ನು ಈ ಹುದ್ದೆಗೆ ನೇಮಕಗೊಳಿಸಿದ್ದಾರೆ

ಈ ಕುರಿತು ನೇಮಕಾತಿ ಆದೇಶ ಹೊರಡಿಸಿರುವ ಎಂ.ಡಿ. ಲಕ್ಷ್ಮಿನಾರಾಯಣ ಅವರು, ಪಕ್ಷದ ಸಂಘಟನೆ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾಂಗ್ರೆಸ್ಸಿನ ಸಬಲೀಕರಣ, ಸಂಘಟನೆ ಹಾಗು ಬಲವರ್ಧನೆ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸಿ ಕೊಡಗಿನಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವಂತೆ ಸೂಚಿಸಿದ್ದಾರೆ.

ಮೂಲತಹ ಗೋಣಿಕೊಪ್ಪಲು ಸಮೀಪದ ಮಾಯಮುಡಿ ಗ್ರಾಮದವರಾದ ಬಾನಂಡ  ಎನ್. ಪ್ರತ್ಯು ಅವರು, 24 ವರ್ಷದ ಪ್ರಾಯದಲ್ಲೇ  ಮಾಯಮುಡಿ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ನೇಮಕಗೊಳ್ಳುವ ಮೂಲಕ ರಾಜಕಾರಣ ಆರಂಭಿಸಿದರು. ನಂತರ ಮಾಯಮುಡಿ ಗ್ರಾ. ಪಂ. ಸದಸ್ಯರಾಗುವ ಮೂಲಕ ಸಾರ್ವಜನಿಕ ಕ್ಷೇತ್ರಕ್ಕೆ ಧುಮುಕಿದರು.

ಮಾಯಮುಡಿ ಗ್ರಾ.ಪಂ. ಉಪಾಧ್ಯಕ್ಷರಾಗಿ, ಆನಂತರ ತಿತಿಮತಿ ಕ್ಷೇತ್ರದ ಜಿ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು, ಬಾಳೆಲೆ ಜಿ. ಪಂ. ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸುವ ಮೂಲಕ ಸತತವಾಗಿ 2ನೇ ಬಾರಿಗೂ ಜಿ. ಪಂ. ಸದಸ್ಯರಾದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಖಿಲ ಕೊಡಗು ಅಮ್ಮ ಕೊಡವ ಸಮಾಜದ ಅಧ್ಯಕ್ಷರಾಗಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು, ಮಾಯಮುಡಿ ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾನಂಡ ಎ. ನಂಜಮಯ್ಯ ಮತ್ತು ಯಶೋಧ ದಂಪತಿಯ ಪುತ್ರರಾಗಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,