Header Ads Widget

ಸರ್ಚ್ ಕೂರ್ಗ್ ಮೀಡಿಯ

ತಿತಿಮತಿ ಗ್ರಾಮ ಪಂಚಾಯಿತಿಯಲ್ಲಿ ಸಂಜೀವಿನಿ ಮಾಸಿಕ ಸಂತೆ ಮತ್ತು ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವಾರ್ಷಿಕ ಮಹಾ ಸಭೆ

ತಿತಿಮತಿ ಗ್ರಾಮ ಪಂಚಾಯಿತಿಯಲ್ಲಿ  ಸಂಜೀವಿನಿ ಮಾಸಿಕ ಸಂತೆ ಮತ್ತು ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

ಜಿಲ್ಲೆಯ ಡಿಜಿಟಲ್ ಗ್ರಂಥಾಲಯಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದ ಪ್ರಧಾನ ಕಾರ್ಯದರ್ಶಿ


ಮಡಿಕೇರಿ ಮಾ.30: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯಿತಿಯಲ್ಲಿ  ಸಂಜೀವಿನಿ ಮಾಸಿಕ ಸಂತೆ ಮತ್ತು ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವಾರ್ಷಿಕ ಮಹಾ ಸಭೆಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಅವರು ಉದ್ಘಾಟಿಸಿದರು.

ನಂತರ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ, ಗ್ರಂಥಾಲಯದ ಗೋಡೆ ಬರಹಗಳು, ಮಹಾನ್ ವ್ಯಕ್ತಿಗಳ ಸಂದೇಶಗಳ ಬಗ್ಗೆ ಗ್ರಂಥಾಲಯದ ಒಟ್ಟಾರೆ ಚಿತ್ರಣದ ಕುರಿತು ಜಿಲ್ಲಾಡಳಿತಕ್ಕೆ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರಿಗೆ ಪ್ರಶಂಸೆ ವ್ಯಕ್ತಪಡಿಸಿದರು. 

ಪ್ರತಿ ದಿನ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಜ್ಞಾನಾರ್ಜನೆ ವೃದ್ಧಿಯಾಗಿ ವಿದ್ಯಾವಂತ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗುತ್ತದೆ. ಓದಿನ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗ್ರಂಥಾಲಯ ಒಂದು ಅತ್ಯುತ್ತಮ ವೇದಿಕೆಯಾಗಿದೆ ಎಂದು ಅವರು ತಿಳಿಸಿದರು. 

ಇದೇ ಸಂದರ್ಭದಲ್ಲಿ ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ತಿತಿಮತಿ ಗ್ರಾ.ಪಂ.ಅಧ್ಯಕ್ಷರಾದ ಎಚ್.ಕೆ.ಆಶಾ, ಉಪಾಧ್ಯಕ್ಷರಾದ ವಿಜಯ, ಗ್ರಾ.ಪಂ.ಸದಸ್ಯರು, ವಿರಾಜಪೇಟೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೆ.ಸಿ.ಅಪ್ಪಣ್ಣ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಗುರುಶಾಂತಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತ,  ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ತಾಂತ್ರಿಕ ಸಂಯೋಜಕ ನಿರಂಜನ್, ತಾಲ್ಲೂಕು ಐ.ಇ.ಸಿ.ಸಂಯೋಜಕರಾದ ನರೇಂದ್ರ, ಇತರರು ಇದ್ದರು.