Header Ads Widget

Responsive Advertisement

ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 115 ನೇ ಜನ್ಮ ದಿನಾಚರಣೆ

ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 115 ನೇ ಜನ್ಮ ದಿನಾಚರಣೆ

ಬಾಬು ಜಗಜೀವನ್ ರಾಂ ಅವರ ಆದರ್ಶ ಮತ್ತು ಚಿಂತನೆಗಳು ದಾರಿದೀಪ: ಅಪ್ಪಚ್ಚು ರಂಜನ್


ಮಡಿಕೇರಿ ಏ.05: ದೇಶದಲ್ಲಿ ತಲೆದೋರಿದ ಆಹಾರ ಸಮಸ್ಯೆ ಹೋಗಲಾಡಿಸಿ, ಹಸಿರು ಕ್ರಾಂತಿಗೆ ಕಾರಣರಾದ ಬಾಬು ಜಗಜೀವನ್ ರಾಂ ಅಂತಹ ಮಹಾನ್ ನಾಯಕರ ಆದರ್ಶಗಳನ್ನು ಪಾಲಿಸಬೇಕಿದೆ ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ  ಆಶ್ರಯದಲ್ಲಿ ಮಂಗಳವಾರ ನಡೆದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 115 ನೇ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಸ್ವಾತಂತ್ರ್ಯ ಹೋರಾಟಗಾರ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರು ದೇಶಕ್ಕಾಗಿ ನೀಡಿದ ಕೊಡುಗೆಗಳು ಅಪಾರ. ಇಂತಹ ಮಹಾನ್ ನಾಯಕರ ಆದರ್ಶ, ಚಿಂತನೆಗಳು ಇಂದಿಗೂ ದಾರಿದೀಪವಾಗಿವೆ. ಶೋಷಿತರ, ದಮನಿತರ ಪರವಾಗಿ ಹೋರಾಟ ನಡೆಸಿದ ಮಾಜಿ ಉಪ ಪ್ರಧಾನಮಂತ್ರಿ  ಬಾಬು ಜಗಜೀವನ್ ರಾಂ ಅವರು ಕೃಷಿ, ರಕ್ಷಣಾ ಸಚಿವರಾಗಿ ಸಲ್ಲಿಸಿದ ಸೇವೆ ಸ್ಮರಣೀಯವಾದದ್ದು ಎಂದು ಅವರು ಹೇಳಿದರು.

1971 ರ ಐತಿಹಾಸಿಕ ವಿಜಯ ಬಾಂಗ್ಲಾ ವಿಮೋಚನೆಯ ಸಮಯದಲ್ಲಿ ಬಾಬು ಜಗಜೀವನ್ ರಾಂ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಅಪ್ಪಚ್ಚು ರಂಜನ್ ಅವರು ತಿಳಿಸಿದರು. 

ಸಮಾಜದಲ್ಲಿನ ಅಸ್ಪøಶ್ಯತೆ ಹೋಗಲಾಡಿಸುವಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆ ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು’ ಎಂದು ಬಣ್ಣಿಸಿದರು. 

‘ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ್ ರಾಂ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ’ ಎಂದು ಹೇಳಿದರು.’ 

ಸರ್ವೋದಯ ಶಿಕ್ಷಣ ಸಂಸ್ಥೆಯ ಸಹಾಯಕ ಪ್ರಾಧ್ಯಪಕರಾದ ಎಚ್.ಆರ್.ಗಿರೀಶ್ ಅವರು ಮಾತನಾಡಿ ತಮ್ಮ ಜೀವಿತಾವಧಿಯಲ್ಲಿ ಬಾಬು ಜಗಜೀವನ್ ರಾಂ ಅವರು ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ಹೊಸ ಅಲೆ ಎಬ್ಬಿಸಿದರು. ಕೃಷಿ ವಲಯಕ್ಕೆ ನೀಡಿದ ಕೊಡುಗೆ ಅಪಾರ. ಅಂತಹ ಧೀಮಂತ ನಾಯಕನ ಆದರ್ಶಗಳನ್ನು ಅಳವಡಿಸಿಕೊಂಡು ಪಾಲಿಸಬೇಕು ಎಂದು ಅವರು ಹೇಳಿದರು. 

ಬಾಬು ಜಗಜೀವನ್ ರಾಂ ಅವರು ಶಿಕ್ಷಣವನ್ನೇ ಅಸ್ತ್ರವನ್ನಾಗಿಸಿ ಉನ್ನತ ಸ್ಥಾನ ಪಡೆದ ಮಹಾನ್ ಚೇತನ. ಅವರು ಸ್ವಾತಂತ್ರ್ಯ ಹೋರಾಟಗಾರರμÉ್ಟೀ ಅಲ್ಲದೆ,  ಸಮಾಜ ಸೇವಕರು ಆಗಿದ್ದರು. ಬಿಹಾರದ ದಲಿತ  ಕುಟುಂಬದಲ್ಲಿ ಜನಿಸಿದ ಅವರು ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿ, ಮೊರಾರ್ಜಿ ದೇಸಾಯಿ ಅವರ ಕಾಲದಲ್ಲಿ ಉಪ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದರು. 

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ,  ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಡಿಎಚ್‍ಒ ಡಾ.ವೆಂಕಟೇಶ, ತಹಶೀಲ್ದಾರ್ ಮಹೇಶ, ಪೌರಾಯುಕ್ತರಾದ ರಾಮದಾಸ್ ಇತರರು ಇದ್ದರು.  

ವಿದ್ಯಾರ್ಥಿಗಳಾದ ಕಾವ್ಯ ಮತ್ತು ಅನುಶ್ರೀ ಪ್ರಾರ್ಥಿಸಿದರು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ ಸ್ವಾಗತಿಸಿದರು. ಸತೀಶ್ ನಿರೂಪಿಸಿದರು, ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಪ್ರಕಾಶ ಅವರು ವಂದಿಸಿದರು.