Header Ads Widget

Responsive Advertisement

ಜನರಲ್ ಕೆ.ಎಸ್.ತಿಮ್ಮಯ್ಯ ಅವರ 116 ನೇ ಜನ್ಮ ದಿನಾಚರಣೆ

ಜನರಲ್ ಕೆ.ಎಸ್.ತಿಮ್ಮಯ್ಯ ಅವರ 116 ನೇ ಜನ್ಮ ದಿನಾಚರಣೆ


ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 116 ನೇ ಜನ್ಮ ದಿನಾಚರಣೆಯು ಗುರುವಾರ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ(ಸನ್ನಿಸೈಡ್)ದಲ್ಲಿ ನಡೆಯಿತು.

ಭಾರತಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮರಿಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಅಮರ್ ಜವಾನ್ ಯುದ್ಧ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಪುಷ್ಪ ನಮನ ಸಲ್ಲಿಸಿದರು.
ನಂತರ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಜನರಲ್ ತಿಮ್ಮಯ್ಯ ಸ್ಮಾರಕ ಭವನವನ್ನು ವೀಕ್ಷಿಸಿದರು.

ನಂತರ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಎದುರು ಜನರಲ್ ತಿಮ್ಮಯ್ಯ ಅವರ ಮ್ಯೂಸಿಯಂನ ವಿಷಯಗಳನ್ನೊಳಗೊಂಡ ಬಿತ್ತಿಪತ್ರವನ್ನು ಬಿಡುಗಡೆ ಮಾಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 116 ನೇ ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಿ.ಸಿ.ನಾಗೇಶ್ ಅವರು ಬಹುಮಾನ ವಿತರಣೆ ಮಾಡಿದರು.

ನಂತರ ಸ್ಮಾರಕ ಭವನದ ಹತ್ತಿರ ಹೊಸದಾಗಿ ನಿರ್ಮಿತವಾದ ‘BLOSSUM’ ಕೆಫೆಯನ್ನು ಸಚಿವರಾದ ಬಿ.ಸಿ.ನಾಗೇಶ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಮಾಜಿ ಸೈನಿಕರು, ಅಧಿಕಾರಿಗಳು ಇತರರು ಇದ್ದರು.